ದೇಶ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್

Ramyashree GN

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಸೋಮವಾರ ದೆಹಲಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದರು ಎಂದು ರಾಜ್ಯ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.

ಕೋವಿಡ್ ಪಾಸಿಟಿವ್ ಆಗಿದ್ದರೂ ಮುಖ್ಯಮಂತ್ರಿಯವರಿಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಹೀಗಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದಾರೆ ಮತ್ತು ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು.

ಡಿಸೆಂಬರ್ 16 ರಂದು ರಾಜಸ್ಥಾನದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಹೆಜ್ಜೆ ಹಾಕಿದ್ದರು.

SCROLL FOR NEXT