ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ. 
ದೇಶ

ಮಹಾರಾಷ್ಟ್ರದ ಇಬ್ಬರು ಸಚಿವರು, ಸಂಸದರಿಂದ ಕರ್ನಾಟಕ ಗಡಿ ಪ್ರದೇಶಗಳಿಗೆ ಭೇಟಿ

ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಮತ್ತು ಸಂಸದ ಧೈರ್ಯಶೀಲ ಮಾನೆ ಅವರು ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ ಕರ್ನಾಟಕದ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮರಾಠಿ...

ಮುಂಬೈ: ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಮತ್ತು ಸಂಸದ ಧೈರ್ಯಶೀಲ ಮಾನೆ ಅವರು ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ ಕರ್ನಾಟಕದ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮರಾಠಿ ಭಾಷಿಕ ಜನರೊಂದಿಗೆ ಸಂವಾದ ನಡೆಸಲಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇಸಾಯಿ, ಪ್ರಸ್ತುತ ನಾಗ್ಪುರದಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಗಡಿ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ವಿಧಾನಸಭಾ ಅಧಿವೇಶನ ಮುಗಿದ ನಂತರ ನಾವು ಮೂವರೂ(ದೇಸಾಯಿ, ಮಾನೆ ಮತ್ತು ಪಾಟೀಲ) ಹೋಗಿ ಗಡಿ ಭಾಗದ ಜನರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಕರ್ನಾಟಕದೊಂದಿಗೆ ಮಹಾರಾಷ್ಟ್ರದ ಗಡಿ ವಿವಾದ ಸಂಯೋಜಕರಾಗಿ ನೇಮಕವಾಗಿದ್ದು, ಡಿಸೆಂಬರ್ 6 ರಂದು ಬೆಳಗಾವಿಗೆ ಭೇಟಿ ನೀಡಬೇಕಿತ್ತು. ಆದರೆ ಗಡಿ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಭೇಟಿ ಮುಂದೂಡಿಕೆಯಾಗಿದೆ.

ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿಸೆಂಬರ್ 3 ರಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿಯಾಗಬೇಕಿತ್ತು ಮತ್ತು ದೀರ್ಘಕಾಲದ ವಿವಾದದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ ಇದು ಸಹ ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT