ಸಂಗ್ರಹ ಚಿತ್ರ 
ದೇಶ

ರಾಜಕೀಯ ಜಾಹೀರಾತು ಪ್ರಕಟ: ರೂ.97 ಕೋಟಿ ವಸೂಲಿ ಮಾಡುವಂತೆ ಲೆ.ಗವರ್ನರ್ ಆದೇಶ, ಅವರಿಗೆ ಅಧಿಕಾರ ಇಲ್ಲ ಎಂದ ಎಎಪಿ

ಸರ್ಕಾರದ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂ.ಗಳನ್ನು ವಸೂಲಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶ ಹೊರಡಿಸಿದ್ದು, ಈ ಆದೇಶ ಹೊರಡಿಸುವ ಅಧಿಕಾರ ಅವರಿಗಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಹೇಳಿದೆ.

ನವದೆಹಲಿ: ಸರ್ಕಾರದ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂ.ಗಳನ್ನು ವಸೂಲಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶ ಹೊರಡಿಸಿದ್ದು, ಈ ಆದೇಶ ಹೊರಡಿಸುವ ಅಧಿಕಾರ ಅವರಿಗಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಹೇಳಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಇದೊಂದು ಹೊಸ ಪ್ರೇಮ ಪತ್ರ ಎಂದು ಬಣ್ಣಿಸಿದ್ದಾರೆ.

ನಮ್ಮ ಪಕ್ಷ ಇದೀಗ ರಾಷ್ಟ್ರೀಯ ಪಕ್ಷವಾಗಿ ಮಾರ್ಪಟ್ಟಿದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿದ್ದೇವೆ ಇದು ಅವರನ್ನು ಗಲಿಬಿಲಿಗೊಳಿಸಿದೆ. ಲೆಫ್ಟಿನೆಂಟ್ ಗವರ್ನರ್ ಸಾಹಬ್ ಅವರು ಬಿಜೆಪಿಯ ನಿರ್ದೇಶನಗಳಿಗೆ ಅನುಗುಣವಾಗಿ ಎಲ್ಲವನ್ನೂ ಮಾಡುತ್ತಿದ್ದಾರೆ. ಇದು ದೆಹಲಿ ಜನತೆಗೆ ಸಮಸ್ಯೆಯನ್ನು ತಂದೊಡ್ಡುತ್ತಿದೆ. ದೆಹಲಿಯ ಜನರು ಹೆಚ್ಚು ಚಿಂತಿತರಾಗಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ಕಾನೂನಿನ ಪರವಾಗಿ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

ಇಂತಹ ಆದೇಶ ನೀಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್'ಗೆ ಇಲ್ಲ. ಅಂತಹ ನಿರ್ದೇಶನಗಳನ್ನು ನೀಡಲು ಅವರಿಗೆ ಸಾಧ್ಯವಿಲ್ಲ. ಈ ನಿರ್ದೇಶನಗಳು ಕಾನೂನಿನ ರೀತಿ ಇಲ್ಲ. ಇತರ ರಾಜ್ಯ ಸರ್ಕಾರಗಳು ಕೂಡ ಜಾಹೀರಾತುಗಳನ್ನು ನೀಡುತ್ತವೆ. ಬಿಜೆಪಿ ಆಡಳಿತ ನಡೆಸುತ್ತಿರುವ ವಿವಿಧ ರಾಜ್ಯ ಸರ್ಕಾರಗಳು ನಮ್ಮಂತೆಯೇ ಜಾಹೀರಾತುಗಳನ್ನು ನೀಡಿವೆ. ಜಾಹೀರಾತಿಗಾಗಿ ಅವರು ವ್ಯಯಿಸಿರುವ 22,000 ಕೋಟಿ ರೂ.ಗಳನ್ನು ವಸೂಲಿ ಮಾಡುವುದು ಯಾವಾಗ? ಅವರಿಂದ ಹಣ ವಸೂಲಿ ಮಾಡಿದ ದಿನ ನಾವೂ 97 ಕೋಟಿ ರೂ.ಗಳನ್ನು ಪಾವತಿ ಮಾಡುತ್ತೇವೆಂದು ತಿಳಿಸಿದ್ದಾರೆ,

ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ಪ್ರಕಟಿಸಿದ ರಾಜಕೀಯ ಜಾಹೀರಾತುಗಳ ಮೊತ್ತ 97 ಕೋಟಿ ರೂಪಾಯಿಗಳನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸ್ಥಾಪಿಸಿದ ಸರ್ಕಾರಿ ಜಾಹೀರಾತಿನಲ್ಲಿ ವಿಷಯ ನಿಯಂತ್ರಣ ಸಮಿತಿಯ 2016 ರ ನಿರ್ದೇಶನದ ಮೇರೆಗೆ ದೆಹಲಿ ಸರ್ಕಾರದ ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (DIP) 97.14 ಕೋಟಿ ರೂಪಾಯಿ ( 97,14,69,137 ರೂಪಾಯಿ) "ಅನುರೂಪವಲ್ಲದ ಜಾಹೀರಾತುಗಳ" ಖಾತೆಯಲ್ಲಿ ಖರ್ಚು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಲ್ಲಿ, 42.26 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಪಾವತಿಗಳನ್ನು ಡಿಐಪಿ ಈಗಾಗಲೇ ಬಿಡುಗಡೆ ಮಾಡಿದ್ದರೆ, ಪ್ರಕಟಿಸಿದ ಜಾಹೀರಾತುಗಳಿಗಾಗಿ 54.87 ಕೋಟಿ ರೂಪಾಯಿಗಳನ್ನು ಇನ್ನೂ ನೀಡಬೇಕಿದೆ ಎಂದು ಮೂಲವೊಂದು ತಿಳಿಸಿದೆ.

ನಿರ್ದೇಶನದ ಮೇರೆಗೆ, ಡಿಐಪಿ 2017 ರಲ್ಲಿ ಎಎಪಿಗೆ 42.26 ಕೋಟಿ ರೂಪಾಯಿಗಳನ್ನು ತಕ್ಷಣವೇ ರಾಜ್ಯದ ಬೊಕ್ಕಸಕ್ಕೆ ಪಾವತಿಸಲು ಮತ್ತು 54.87 ಕೋಟಿ ರೂಪಾಯಿಗಳನ್ನು ನೇರವಾಗಿ ಜಾಹೀರಾತು ಏಜೆನ್ಸಿಗಳು ಅಥವಾ ಪ್ರಕಟಣೆಗಳಿಗೆ 30 ದಿನಗಳಲ್ಲಿ ಪಾವತಿಸಲು ನಿರ್ದೇಶಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ, ಐದು ವರ್ಷ ಎಂಟು ತಿಂಗಳು ಕಳೆದರೂ ಎಎಪಿ ಡಿಐಪಿ ಆದೇಶವನ್ನು ಪಾಲಿಸಿಲ್ಲ. ನಿರ್ದಿಷ್ಟ ಆದೇಶದ ಹೊರತಾಗಿಯೂ ಸಾರ್ವಜನಿಕ ಹಣವನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪಕ್ಷದಿಂದ ಠೇವಣಿ ಮಾಡದ ಕಾರಣ ಇದು ಸಾರ್ವಜನಿಕ ಹಣದ ಲೂಟಿಯಾಗಿದೆ. ನೋಂದಾಯಿತ ರಾಜಕೀಯ ಪಕ್ಷವೊಂದು ನ್ಯಾಯಸಮ್ಮತವಾದ ಆದೇಶವನ್ನು ಧಿಕ್ಕರಿಸುವುದು ನ್ಯಾಯಾಂಗದ ಅವಹೇಳನ ಮಾತ್ರವಲ್ಲ, ಉತ್ತಮ ಆಡಳಿತಕ್ಕೆ ಸಹ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮೂಲಗಳು ತಿಳಿಸಿವೆ.

2015 ರಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರಿ ಜಾಹೀರಾತನ್ನು ನಿಯಂತ್ರಿಸಲು ಮತ್ತು ಅನುತ್ಪಾದಕ ವೆಚ್ಚಗಳನ್ನು ತೊಡೆದುಹಾಕಲು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ನಂತರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 2016 ರಲ್ಲಿ ಸರ್ಕಾರಿ ಜಾಹೀರಾತಿನಲ್ಲಿ ವಿಷಯ ನಿಯಂತ್ರಣದ (CCRGA) ಮೂರು ಸದಸ್ಯರ ಸಮಿತಿಯನ್ನು ರಚಿಸಿತು.

CCRGA, ಡಿಐಪಿ ಪ್ರಕಟಿಸಿದ ಜಾಹೀರಾತುಗಳನ್ನು ತನಿಖೆ ಮಾಡಿ ಸೆಪ್ಟೆಂಬರ್ 2016 ರಲ್ಲಿ ಆದೇಶವನ್ನು ಹೊರಡಿಸಿದ್ದು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ "ಮಾರ್ಗಸೂಚಿಗಳ ಸಂಪೂರ್ಣ ಉಲ್ಲಂಘನೆ" ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT