ದೇಶ

ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ

Ramyashree GN

ನವದೆಹಲಿ: ಭಾರತ-ಚೀನಾ ಗಡಿಯಲ್ಲಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆಕ್ರಮಣದ ನಡುವೆಯೇ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಚಳಿಗಾಲದ ಅಧಿವೇಶನದ ಉಳಿದ ಸಮಯದಲ್ಲಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಸಂಸತ್ತಿನಲ್ಲಿ ಎಲ್ಲಾ ಪಕ್ಷದ ಸಂಸದರ ಸಭೆಯನ್ನು ಬುಧವಾರ ನಡೆಸಿದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸ­ದೀಯ ಪಕ್ಷದ (ಸಿಪಿಪಿ) ಸಭೆ ನಡೆದಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಪಕ್ಷದ ಎಲ್ಲಾ ಸಂಸದರು ಉಪಸ್ಥಿತರಿದ್ದರು.

ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ ಸಂಸ­ದೀಯ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಇದಾದ ಬಳಿಕ, ಭಾರತ-ಚೀನಾ ಗಡಿ ಉದ್ವಿಗ್ನತೆ ಕುರಿತು ಸದನದಲ್ಲಿ ಚರ್ಚೆಗೆ ಒತ್ತಾಯಿಸಿ ಸಂಸತ್ತಿನ ಸಂಕೀರ್ಣದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.

ಇತರ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಡಿಸೆಂಬರ್ 7 ರಂದು ಚಳಿಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಭಾರತ-ಚೀನಾ ಗಡಿ ಉದ್ವಿಗ್ನತೆ ಮತ್ತು ಇತ್ತೀಚಿನ ಚೀನಾದ ಉಲ್ಲಂಘನೆಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

SCROLL FOR NEXT