ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಚೀನಾ ಸೇರಿ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಉಲ್ಭಣ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಸಭೆ

ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ. 

ನವದೆಹಲಿ: ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ. 

ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಇಂದು ಉನ್ನತ ಮಟ್ಟದ ಸಭೆ: ದೇಶದಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ; ಹಿರಿಯ ಅಧಿಕಾರಿಗಳು, ತಜ್ಞರೊಂದಿಗೆ ಅವರು ಕೋವಿಡ್ ಪರಿಸ್ಥಿತಿಯ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ಚೀನಾದಲ್ಲಿ ಕೋವಿಡ್ ಉಲ್ಬಣಕ್ಕೆ ಕಾರಣವಾಗುವ ಓಮಿಕ್ರಾನ್ ಉಪ ರೂಪಾಂತರಿ ವೈರಸ್ ನ ಕನಿಷ್ಠ ಮೂರು ಪ್ರಕರಣಗಳು ಭಾರತದಲ್ಲಿ ವರದಿಯಾಗಿರುವುದರಿಂದ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನಿನ್ನೆ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಿ ಅದನ್ನು ಎದುರಿಸಲು ಕ್ರಮಗಳ ಸರಣಿಯನ್ನು ಘೋಷಿಸಿದರು.

BF.7 ರೂಪಾಂತರಿ ಕೊರೋನಾ ಭಾರತದಲ್ಲಿ ಮೊದಲ ಪ್ರಕರಣ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ಪತ್ತೆಯಾಗಿದ್ದರೆ, ಎರಡನೆಯದು ಒಂದು ತಿಂಗಳ ನಂತರ ಅದೇ ರಾಜ್ಯದಿಂದ ಪತ್ತೆಯಾಗಿದೆ. ಮೂರನೇ ಪ್ರಕರಣ ಒಡಿಶಾದಿಂದ ಬಂದಿದೆ.

ಚೀನಾದ ಹೊರತಾಗಿ, BF.7 ಈಗಾಗಲೇ ಅಮೆರಿಕ, ಇಂಗ್ಲೆಂಡ್ ಮತ್ತು ಯುರೋಪಿಯನ್ ಯೂನಿಯನ್, ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಮತ್ತು ಡೆನ್ಮಾರ್ಕ್‌ನಂತಹ ದೇಶಗಳನ್ನು ತಲುಪಿದೆ. ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಅನುಕೂಲವಾಗುವಂತೆ INSACOG ಲ್ಯಾಬ್‌ಗಳಿಗೆ ಎಲ್ಲಾ ಕೋವಿಡ್ -19 ಪ್ರಕರಣಗಳ ಮಾದರಿಗಳನ್ನು ಪ್ರತಿದಿನ ಕಳುಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದಾರೆ.

ಇನ್ನು ಕ್ರಿಸ್ ಮಸ್, ಹೊಸವರ್ಷ ಸಂಭ್ರಮಾಚರಣೆ ಇರುವುದರಿಂದ  ಕಾಣಿಸಿಕೊಳ್ಳಬಹುದಾದ ಹೊಸ ತಳಿಗಳ ವಿರುದ್ಧ ಸನ್ನದ್ಧರಾಗಿರುವುದರ ಮಹತ್ವವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವಂತೆ ಮತ್ತೆ ಜನರನ್ನು ಒತ್ತಾಯಿಸುತ್ತಿದ್ದಾರೆ. 

ಕಳೆದ ಆರು ವಾರಗಳಲ್ಲಿ ಜಾಗತಿಕ ಮಟ್ಟದಲ್ಲಿ ಕೊರೋನಾದ ಸ್ಥಿರವಾದ ಏರಿಕೆ ವರದಿಯಾಗಿದೆ, ವಾರದಲ್ಲಿ 5.9 ಲಕ್ಷ ಸರಾಸರಿ ದೈನಂದಿನ ಪ್ರಕರಣಗಳು ಡಿಸೆಂಬರ್ 19 ಕ್ಕೆ ಕೊನೆಗೊಳ್ಳುತ್ತದೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಫ್ರಾನ್ಸ್ ಮತ್ತು US ನಲ್ಲಿ ಪ್ರಕರಣಗಳ ಸಂಖ್ಯೆ ವಿಶೇಷವಾಗಿ ಹೆಚ್ಚಾಗಿದೆ.

BF.7 ಒಮಿಕ್ರಾನ್ ರೂಪಾಂತರದ BA.5 ನ ಉಪ-ವಂಶಾವಳಿಯು ಪ್ರಬಲವಾದ ಸೋಂಕಿನ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚು ಹರಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT