ಸಾಂದರ್ಭಿಕ ಚಿತ್ರ 
ದೇಶ

ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯ; ನಿರಾಕರಿಸಿದ ವಿದ್ಯಾರ್ಥಿನಿಯನ್ನು ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡಿದ ಪ್ರೊಫೆಸರ್!

ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್‌ ಒಬ್ಬರು ವಿದ್ಯಾರ್ಥಿನಿಯಿಂದ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದು, ಅದನ್ನು ನಿರಾಕರಿಸಿದಾಗ ಆಕೆಯನ್ನು ಅನುತ್ತೀರ್ಣ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕೋಟಾ: ಇಲ್ಲಿನ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್‌ ಒಬ್ಬರು ವಿದ್ಯಾರ್ಥಿನಿಯಿಂದ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದು, ಅದನ್ನು ನಿರಾಕರಿಸಿದಾಗ ಆಕೆಯನ್ನು ಅನುತ್ತೀರ್ಣ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿನಿ ನೀಡಿದ ಪೊಲೀಸ್ ದೂರಿನ ಪ್ರಕಾರ, ಪ್ರೊಫೆಸರ್ ತನ್ನ ಸಹಪಾಠಿಯೊಬ್ಬನ ಮೂಲಕ ತನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬುಧವಾರ ರಾತ್ರಿ ಆರೋಪಿಯೊಂದಿಗೆ ವಿದ್ಯಾರ್ಥಿನಿಯ ಸಹಪಾಠಿಯನ್ನು ಕೂಡ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದ ನಂತರ, ಪ್ರೊಫೆಸರ್ ಮತ್ತು ಸಹಪಾಠಿ ನಡುವಿನ ಸಂಭಾಷಣೆಯ ಆಡಿಯೊ ರೆಕಾರ್ಡಿಂಗ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದರಲ್ಲಿ ಪ್ರೊಫೆಸರ್ ಸಂತ್ರಸ್ತೆಯ ಬಗ್ಗೆ ಅಸಭ್ಯ ಹೇಳಿಕೆಗಳನ್ನು ನೀಡುವುದನ್ನು ಕೇಳಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ದಾದಾಭಾರಿ ಪೊಲೀಸ್ ಠಾಣೆಯಲ್ಲಿ ಪ್ರೊಫೆಸರ್ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಡಿ (ಹಿಂಬಾಲಿಸುವಿಕೆ) ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಸಂತ್ರಸ್ತೆ ಮತ್ತು ಇನ್ನೊಬ್ಬ ವಿದ್ಯಾರ್ಥಿನಿಯ ಹೇಳಿಕೆಯನ್ನು ಬುಧವಾರ ದಾಖಲಿಸಿಕೊಂಡಿದ್ದು, ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ದೂರುದಾರರು ತಮ್ಮ ದೂರಿನಲ್ಲಿ ಇನ್ನೊಬ್ಬ ಸಂತ್ರಸ್ತೆಯ ಹೆಸರನ್ನೂ ಉಲ್ಲೇಖಿಸಿದ್ದಾರೆ. ಅವರಿಬ್ಬರ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ. ನಾವು ಇನ್ನು ಎಷ್ಟು ಜನರ ಸಂತ್ರಸ್ತರಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ವಿಷಯದಲ್ಲಿ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದೂರಿನ ಪ್ರಕಾರ, ಮಹಿಳೆ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ ಮತ್ತು ಪುರುಷ ಸಹಪಾಠಿಯ ಮೂಲಕ ಪ್ರೊಫೆಸರ್, ಲೈಂಗಿಕವಾಗಿ ಸಹಕರಿಸಿದರೆ, ಅದಕ್ಕೆ ಪ್ರತಿಯಾಗಿ ಪರೀಕ್ಷೆಯಲ್ಲಿ ಉತ್ತೀರ್ಣ ಮಾಡುತ್ತೇನೆ ಎಂದಿದ್ದರು. ಆಕೆ ಇದನ್ನು ನಿರಾಕರಿಸಿದಾಗ, ಆಕೆಯನ್ನು ಅಂತಿಮ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದಾರೆ ಮತ್ತು ನಂತರ, ಅವರ ಪ್ರಸ್ತಾಪವನ್ನು ಸ್ವೀಕರಿಸುವಂತೆ ಪದೇ ಪದೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಇತರ ವಿದ್ಯಾರ್ಥಿನಿಯರಿಗೂ ಇದೇ ರೀತಿ ಮಾಡಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT