ಚೆನ್ನೈ ರೈಲು ನಿಲ್ದಾಣದ ಮುಂಭಾಗದಲ್ಲಿ ಮಾಸ್ಕ್ ಇಲ್ಲದೇ ಪ್ರವೇಶವಿಲ್ಲ ಎಂಬ ಸಂದೇಶದ ಚಿತ್ರವನ್ನು ರಚಿಸುತ್ತಿರುವ ಕಲಾವಿದ (ಸಂಗ್ರಹ ಚಿತ್ರ) 
ದೇಶ

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಂಸದರು ಮಾಸ್ಕ್ ಧರಿಸುವಂತೆ ಹೇಳಿದ ಸ್ಪೀಕರ್, ಸಭಾಪತಿ

ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

ನವದೆಹಲಿ: ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

ಬಿರ್ಲಾ ಅವರು ಸ್ವತಃ ಮಾಸ್ಕ್ ಧರಿಸಿ ಸದನಕ್ಕೆ ಬಂದರು ಮತ್ತು ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುತ್ತಿವೆ ಎಂದು ಹೇಳಿದರು.

ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಮತ್ತು ಕೋವಿಡ್ ಸಂಬಂಧಿತ ನಿಯಮಾವಳಿಗಳನ್ನು ಅನುಸರಿಸಲು ಜನರನ್ನು ಕೇಳಿದೆ. ಸಾಂಕ್ರಾಮಿಕ ರೋಗದ ಹಿಂದಿನ ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಜಾಗರೂಕರಾಗಿರಬೇಕು. ಲೋಕಸಭೆಯ ಚೇಂಬರ್‌ನ ಪ್ರವೇಶ ದ್ವಾರಗಳಲ್ಲಿ ಸಂಸದರಿಗೆ ಮಾಸ್ಕ್‌ಗಳನ್ನು ಲಭ್ಯಗೊಳಿಸಲಾಗಿದೆ ಮತ್ತು ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಅವರು ಸದಸ್ಯರಿಗೆ ಹೇಳಿದರು.

ಲಸಿಕೆ ಹಾಕಿಸಿಕೊಳ್ಳಲು ಮತ್ತು ಮಾಸ್ಕ್ ಧರಿಸುವಂತೆ ಸರ್ಕಾರ ಬುಧವಾರ ಜನರಿಗೆ ಸಲಹೆ ನೀಡಿದೆ. ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಯಾದೃಚ್ಛಿಕ ಮಾದರಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅದು ಹೇಳಿದೆ.

ರಾಜ್ಯಸಭೆಯಲ್ಲೂ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ ಸಭಾಪತಿ

ವಿಶ್ವದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಂಸದರು ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಅಭ್ಯಾಸ ಮಾಡಬೇಕು. ಸದನವು ರಾಷ್ಟ್ರವನ್ನು ಉದಾಹರಣೆಯಾಗಿ ಮುನ್ನಡೆಸುವ ಅಗತ್ಯವಿದೆ ಎಂದು ರಾಜ್ಯಸಭೆ ಸಭಾಪತಿ ಮತ್ತು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಗುರುವಾರ ಹೇಳಿದ್ದಾರೆ.

ಸದನವು ಆರಂಭಗೊಂಡಾಗ, ಅವರು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಉಲ್ಲೇಖಿಸಿದರು. ಪ್ರಪಂಚದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಲು ನಾನು ಎಲ್ಲ ಸದಸ್ಯರನ್ನು ಕೋರುತ್ತೇನೆ ಎಂದರು.

ನಮ್ಮ ದೇಶವಾಸಿಗಳ ಮುಂದೆ ಒಂದು ಉದಾಹರಣಯಾಗಿ ನಿಲ್ಲುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆಡಳಿತ, ವೈದ್ಯರು, ಆರೋಗ್ಯ ವೃತ್ತಿಪರರು ಮತ್ತು ನೈರ್ಮಲ್ಯ ಕಾರ್ಯಕರ್ತರ ಸಂಘಟಿತ ಪ್ರಯತ್ನಗಳಿಂದ ಹಿಂದೆ ಕೋವಿಡ್-19 ರ ಸವಾಲುಗಳನ್ನು ಜಯಿಸಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT