ಪ್ರತ್ಯಕ್ಷ ದೃಶ್ಯ 
ದೇಶ

ಸಿಕ್ಕಿಂ: ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!

ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಸಿಕ್ಕಿಂ: ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಚಟ್ಟೇನ್‌ನಿಂದ ಥಂಗು ಕಡೆಗೆ ತೆರಳುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ಕಡಿದಾದ ಕಂದಕಕ್ಕೆ ಜಾರಿದೆ. ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. 

ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಯೋಧರು ಸೇರಿದ್ದಾರೆ. 

ಯೋಧರ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್‌ಟಾಕ್‌ನ ಸರ್ಕಾರಿ ಎಸ್‌ಟಿಎನ್‌ಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಸೇನೆಗೆ ಹಸ್ತಾಂತರಿಸಲಾಗುತ್ತದೆ.

16 ಯೋಧರು ಹುತಾತ್ಮ; ಸಂತಾಪ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ಯೋಧರ ಸಾವಿನಿಂದ ನನಗೆ ತೀವ್ರ ನೋವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹುತಾತ್ಮ ಯೋಧರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಕೃತಜ್ಞವಾಗಿದೆ. ಹುತಾತ್ಮ ಯೋಧರ ಕುಟುಂಬಗಳಿಗೆ ನಾನು ಸಂತಾಪ ತಿಳಿಸುತ್ತೇನೆ. ಇನ್ನು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT