ಮಹಾರಾಷ್ಟ್ರ ಸಿಎಂ ಶಿಂಧೆ 
ದೇಶ

ಕರ್ನಾಟಕದ ಬಳಿಕ ಈಗ ಗಡಿ ವಿಷಯವಾಗಿ ನಿರ್ಣಯ ಮಂಡಿಸಲು ಮುಂದಾದ ಮಹಾರಾಷ್ಟ್ರ!

ಗಡಿ ವಿಷಯದಲ್ಲಿ ಕರ್ನಾಟಕ ಅಂಗೀಕರಿಸಿದ್ದ ಮಹಾರಾಷ್ಟ್ರ ವಿರುದ್ಧದ ನಿರ್ಣಯದ ಮಾದರಿಯಲ್ಲೇ ಮಹಾರಾಷ್ಟ್ರ ಸಹ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಮುಂದಾಗಿದೆ.

ಮುಂಬೈ: ಗಡಿ ವಿಷಯದಲ್ಲಿ ಕರ್ನಾಟಕ ಅಂಗೀಕರಿಸಿದ್ದ ಮಹಾರಾಷ್ಟ್ರ ವಿರುದ್ಧದ ನಿರ್ಣಯದ ಮಾದರಿಯಲ್ಲೇ ಮಹಾರಾಷ್ಟ್ರ ಸಹ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಮುಂದಾಗಿದೆ. 

ರಾಜ್ಯಕ್ಕಿಂತಲೂ 10 ಪಟ್ಟು ತೀಕ್ಷ್ಣವಾದ ನಿರ್ಣಯವನ್ನು ಗಡಿ ವಿಷಯವಾಗಿ ಅಂಗೀಕರಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ವಾರ ಗಡಿ ವಿಷಯದ ವಿರುದ್ಧ ನಿರ್ಣಯ ಮಂಡನೆಯಾಗಿ ಅಂಗೀಕಾರವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
 
ಅಲ್ಲಿನ ಅಬಕಾರಿ ಸಚಿವ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ಗಡಿ ವಿಷಯವಾಗಿ ನಿರ್ಣಯ ಅಂಗೀಕರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಗುರುವಾರದಂದು ರಾಜ್ಯದ ವಿಧಾನಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿಷಯವಾಗಿ ಮಂಡಿಸಲಾಗಿದ್ದ ನಿರ್ಣಯವನ್ನು ಒಕ್ಕೊರಲಿನಿಂದ ಅಂಗೀಕರಿಸಲಾಗಿತ್ತು ಹಾಗೂ ರಾಜ್ಯದ ಪ್ರತಿ ಇಂಚು ಜಾಗವನ್ನು, ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವುದಾಗಿ ನಿರ್ಣಯದಲ್ಲಿ ತಿಳಿಸಲಾಗಿತ್ತು.

ಮಹಾರಾಷ್ಟ್ರದ ಅಬಕಾರಿ ಸಚಿವ ದೇಸಾಯಿ ಈ ಬಗ್ಗೆ ಮಾತನಾಡಿ, ಅಮಿತ್ ಶಾ ಅವರೊಂದಿಗಿನ ಸಭೆಯ ಬಳಿಕವೂ ಕರ್ನಾಟಕ ಸಿಎಂ ಸಭೆಯ ತೀರ್ಮಾನವನ್ನು ಗೌರವಿಸಲಿಲ್ಲ. ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ ಹಾಗೂ ಸಿಎಂ ಏಕನಾಥ್ ಶಿಂಧೆ ಇಬ್ಬರಿಗೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಸಮನ್ವತ ಸಮಿತಿಯ ಸದಸ್ಯರೂ ಆಗಿರುವ ದೇಸಾಯಿ, ಸರ್ಕಾರದ ನಿರ್ಣಯ ರಾಜ್ಯದ ಪರವಾಗಿರಲಿದೆ, ಮಹಾರಾಷ್ಟ್ರದ ನಾಯಕರು ಕರ್ನಾಟಕಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದ್ದನ್ನೂ ನಿರ್ಣಯದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT