ಡಾ. ಕಂಗ್ 
ದೇಶ

ಸದ್ಯಕ್ಕೆ ಭಾರತದಲ್ಲಿ ಕೋವಿಡ್ ಉಲ್ಬಣವಾಗುವ ಸಾಧ್ಯತೆ ಇಲ್ಲ: ವೈರಾಲಜಿಸ್ಟ್ ಡಾ. ಕಂಗ್

ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ವಿಶ್ವವನ್ನೇ ತಲ್ಲಣಗೊಳಿಸಿವೆ. ಆದರೆ ಭಾರತದಲ್ಲಿ ಈ ಉಪ ತಳಿಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ

ನವದೆಹಲಿ: ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ವಿಶ್ವವನ್ನೇ ತಲ್ಲಣಗೊಳಿಸಿವೆ. ಆದರೆ ಭಾರತದಲ್ಲಿ ಈ ಉಪ ತಳಿಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಈಗಾಗಲೇ ಬಿಎಫ್.7ನ ಕೆಲವು ಪ್ರಕರಣಗಳು ಭಾರತಗಲ್ಲಿ ವರದಿಯಾಗಿವೆ. ಆದರೆ ಅವುಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿಲ್ಲ. ಹೀಗಾಗಿ ಸದ್ಯಕ್ಕೆ ಭಾರತದಲ್ಲಿ ಕೊರೋನಾ ಉಲ್ಬಣವಾಗುತ್ತದೆ ಎಂದು ನಿರೀಕ್ಷಿಸಬೇಡಿ ಎಂದು ಖ್ಯಾತ ವೈರಾಲಜಿಸ್ಟ್ ಗಂಗನ್‌ದೀಪ್ ಕಂಗ್ ಅವರು ಶುಕ್ರವಾರ ಹೇಳಿದ್ದಾರೆ.

BF.7, ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೋನಾ ವೈರಸ್ ಭಾರೀ ಪ್ರಮಾಣದಲ್ಲಿ ಹರಡುವಂತೆ ಮಾಡಿದ್ದು, ಇದರಿಂದ ಆತಂಕಗೊಂಡಿರುವ ಭಾರತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಆರಂಭಿಸಿದೆ.

"XBB ಹಾಗೂ BF.7 ಸಹ ಓಮಿಕ್ರಾನ್ ನ ಉಪ ತಳಿಗಳು. ಈ ರೂಪಾಂತರಿ ಡೆಲ್ಟಾಕ್ಕಿಂತ ಹೆಚ್ಚು ತೀವ್ರವಾದ ರೋಗವನ್ನು ಉಂಟುಮಾಡುವುದಿಲ್ಲ" ಎಂದು ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜಿನ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿರುವ ಡಾ.ಕಂಗ್ ಅವರು ಟ್ವೀಟ್ ಮಾಡಿದ್ದಾರೆ.

"ಈ ಸಮಯದಲ್ಲಿ, ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದು ಕಂಗ್ ಹೇಳಿದ್ದಾರೆ. ಆದರೆ "ವೈರಸ್‌ನ ನಡವಳಿಕೆಯಲ್ಲಿನ ಬದಲಾವಣೆಯ ಸೂಚನೆಯನ್ನು ಪತ್ತೆಹಚ್ಚಲು" ಕಣ್ಗಾವಲು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT