ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ 
ದೇಶ

ದೇಶದಾದ್ಯಂತ ಕೋವಿಡ್ ಭೀತಿ: 24 ಗಂಟೆಗಳಲ್ಲಿ 201 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಇದೇ ವೇಲೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.14ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ.

24 ಗಂಟೆಗಳ ಅವಧಿಯಲ್ಲಿ 1,36,315 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೂ 90.97 ಕೋಟಿ ಜನರಿಗೆ ಕೊರೊನಾವೈರಸ್ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಾದ್ಯಂತ ಈವರೆಗೂ 4,41,42,791 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಮರಣ ಪ್ರಾಣ ಶೇ 1.19ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.04 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!