ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು
ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ.
ಡೆಹ್ರಾಡೂನ್: ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ.
ಎಬಿವಿಪಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಸ್ವತಂತ್ರರು 33 ಸ್ಥಾನಗಳಲ್ಲಿ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಕೇವಲ 18 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಉಳಿದ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ
ಎರಡು ವರ್ಷಗಳ ನಂತರ ನಡೆದ ಈ ಚುನಾವಣೆಯಲ್ಲಿ ಪ್ರಮುಖ ಕಾಲೇಜುಗಳಲ್ಲಿ ಮಹಿಳಾ ಅಭ್ಯರ್ಥಿಗಳು ಐತಿಹಾಸಿಕ ಜಯ ದಾಖಲಿಸಿದ್ದಾರೆ. ರಾಜ್ಯದ 123 ಕಾಲೇಜುಗಳಲ್ಲಿ ಏಕಕಾಲಕ್ಕೆ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕೆಲವೊಂದು ಸಣ್ಣಪುಟ್ಟ ಅಹಿತಕರ ಘಟನೆ ಹೊರತುಪಡಿಸಿದರೆ ಉಳಿದ ಎಲ್ಲಾ ಕಡೆಗಳಲ್ಲಿ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿತ್ತು.
ಉತ್ತರಾಖಂಡ್ ನ ಅತಿದೊಡ್ಡ ವಿದ್ಯಾರ್ಥಿ ಒಕ್ಕೂಟವಾದ ಡೆಹ್ರಾಡೂನ್ನ ಡಿಎವಿ ಪಿಜಿ ಕಾಲೇಜಿನಲ್ಲಿ ಎನ್ಎಸ್ಯುಐ ಸತತ 14 ನೇ ಬಾರಿಗೆ ಸೋಲನ್ನು ಅನುಭವಿಸಿತು. ಎಬಿವಿಪಿಯ ದಯಾಳ್ ಬಿಷ್ತ್ ಇಲ್ಲಿ ಗೆದ್ದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.