ದೇಶ

ಚೀನಾದಿಂದ ಬಂದಿದ್ದ ವ್ಯಕ್ತಿಗೆ ಕೋವಿಡ್; ತಾಜ್ ಮಹಲ್, ಆಗ್ರಾ ಕೋಟೆಗೆ ಬರುವ ವಿದೇಶಿಗರ ಕೋವಿಡ್ ಪರೀಕ್ಷೆ

Ramyashree GN

ಆಗ್ರಾ: ಎರಡು ದಿನಗಳ ಹಿಂದೆ ಚೀನಾದಿಂದ ಹಿಂದಿರುಗಿದ 40 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ತಗುಲಿರುವುದು ಪತ್ತೆಯಾಗಿದೆ. ನಂತರ ಅವರನ್ನು ಇಲ್ಲಿನ ಅವರ ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಭಾನುವಾರ ತಿಳಿಸಿದ್ದಾರೆ.

ಕೋವಿಡ್ ರೂಪಾಂತರಿಗಳ ಪತ್ತೆಗೆ ಅವರ ಮಾದರಿಗಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ಗಾಗಿ (ವಂಶವಾಹಿ ಸಂರಚನೆ ವಿಶ್ಲೇಷಣೆ) ಲಖನೌಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.

ವ್ಯಕ್ತಿಯನ್ನು ಅವರ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿರಿಸಲಾಗಿದ್ದು, ಅವರ ಕುಟುಂಬ ಸದಸ್ಯರು ಮತ್ತು ಅವರೊಂದಿಗೆ ಸಂಪರ್ಕಕ್ಕೆ ಬಂದವರ ಪರೀಕ್ಷೆಗಳನ್ನು ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ ಎಂದು ಶ್ರೀವಾಸ್ತವ ತಿಳಿಸಿದರು.

ಈ ವ್ಯಕ್ತಿ ಡಿಸೆಂಬರ್ 23 ರಂದು ಚೀನಾದಿಂದ ದೆಹಲಿ ಮೂಲಕ ಆಗ್ರಾಕ್ಕೆ ಹಿಂದಿರುಗಿದ ನಂತರ ಖಾಸಗಿ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದರು.
ನವೆಂಬರ್ 25ರ ನಂತರ ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆ, ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್‌ಲೆಂಡ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಮತ್ತು ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು ಸೇರಿದಂತೆ ಆರೋಗ್ಯ ಸೌಲಭ್ಯಗಳ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಡಿಸೆಂಬರ್ 27 ರಂದು ಅಣಕು ಪ್ರದರ್ಶನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ.

ಈಮಧ್ಯೆ, ಆಗ್ರಾದ ಆರೋಗ್ಯ ಇಲಾಖೆಯು ಇಲ್ಲಿ ತಾಜ್ ಮಹಲ್, ಆಗ್ರಾ ಕೋಟೆ ಮತ್ತು ಅಕ್ಬರ್ ಸಮಾಧಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಸ್ಕ್ರೀನಿಂಗ್ ಮತ್ತು ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಅಲ್ಲದೆ, ಆಗ್ರಾ ವಿಮಾನ ನಿಲ್ದಾಣ, ರೈಲು ನಿಲ್ದಾಣ ಮತ್ತು ಇಂಟರ್ ಬಸ್ ಟರ್ಮಿನಲ್ (ಐಎಸ್‌ಬಿಟಿ) ನಲ್ಲಿಯೂ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ ಮತ್ತು ಗ್ರಾಮೀಣ ಆಗ್ರಾದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಾದರಿ ಸಂಗ್ರಹವನ್ನು ಆದ್ಯತೆಯೊಂದಿಗೆ ಪ್ರಾರಂಭಿಸಲಾಗಿದೆ.
ಶೀತ, ಕೆಮ್ಮು ಮತ್ತು ಜ್ವರದ ಲಕ್ಷಣಗಳನ್ನು ಹೊಂದಿರುವವರು ಕೋವಿಡ್ ಪರೀಕ್ಷೆಗೆ ಒಳಗಾಗಲು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

SCROLL FOR NEXT