ಪ್ರಾತಿನಿಧಿಕ ಚಿತ್ರ 
ದೇಶ

ಟೀ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ 41 ವರ್ಷದ ವ್ಯಕ್ತಿ, ಆರೋಪಿಯನ್ನು ಬಂಧಿಸಿದ ಪೊಲೀಸರು

ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉಜ್ಜೈನಿ: ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಝಾರ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಘಾಟಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ತನ್ನ 40 ವರ್ಷದ ಹೆಂಡತಿಯು ಚಹಾವನ್ನು ಮಾಡದ ಕಾರಣ ರೋಲಿಂಗ್ ಬೋರ್ಡ್‌ನಿಂದ (ಚಪಾತಿ ತಯಾರಿಸಲು ಬಳಸಲಾಗುತ್ತದೆ) ಹಲ್ಲೆ ನಡೆಸಿದ್ದಾನೆ ಎಂದು ಜಾರ್ಡಾ ಪೊಲೀಸ್ ಠಾಣೆಯ ಉಸ್ತುವಾರಿ ವೀರೇಂದ್ರ ಸಿಂಗ್ ಹೇಳಿದ್ದಾರೆ.

ನಂತರ ಆರೋಪಿ ತನ್ನ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಿದ್ದಾನೆ. ಆದರೆ, ಮೃತಳ ದೇಹದ ಮೇಲೆ ವಿದ್ಯುತ್ ಸ್ಪರ್ಶದ ಗುರುತುಗಳಿರಲಿಲ್ಲ ಮತ್ತು ಬಳಿಕ ಆಕೆ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿ ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯು ಬೇರೆ ರೀತಿಯಲ್ಲಿ ಸೂಚಿಸಿದೆ ಎಂದು ಅಧಿಕಾರಿ ಹೇಳಿದರು.

ಆರೋಪಿಯು ತನಿಖೆಯ ವೇಳೆ ಪರಾರಿಯಾಗಿದ್ದು, ನಂತರ ಬಂಧಿಸಲಾಯಿತು, ವಿಚಾರಣೆ ವೇಳೆ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!