ಪ್ರಧಾನಿ ಮೋದಿ, ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಸಾಂದರ್ಭಿಕ ಚಿತ್ರ 
ದೇಶ

ಪ್ರಧಾನಿ ಮೋದಿ ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ದೂರವಾಣಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಸೋಮವಾರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿ-20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಝೆಲೆನ್ಸ್ಕಿ ಅಭಿನಂದಿಸಿದ್ದು, ಭಾರತ ಶಾಂತಿ ಸೂತ್ರದ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಸೋಮವಾರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿ-20 ಶೃಂಗಸಭೆಯ ಅಧ್ಯಕ್ಷ ಸ್ಥಾನ ಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಝೆಲೆನ್ಸ್ಕಿ ಅಭಿನಂದಿಸಿದ್ದು, ಭಾರತ ಶಾಂತಿ ಸೂತ್ರದ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಆಹಾರ ಮತ್ತು ಇಂಧನ ಭದ್ರತೆಯಂತಹ ವಿಷಯಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಕಳವಳಗಳಿಗೆ ಧ್ವನಿ ನೀಡುವುದು ಸೇರಿದಂತೆ ಭಾರತದ ಜಿ-20 ಅಧ್ಯಕ್ಷತೆಯ  ಪ್ರಮುಖ ಆದ್ಯತೆಗಳನ್ನು ಪ್ರಧಾನಮಂತ್ರಿ ವಿವರಿಸಿದ್ದಾರೆ.  ಉಭಯ ನಾಯಕರು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಅವಕಾಶಗಳ ಕುರಿತು ಚರ್ಚಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಉಕ್ರೇನ್‌ನಿಂದ ಹಿಂತಿರುಗಬೇಕಾದ ಭಾರತೀಯ ವಿದ್ಯಾರ್ಥಿಗಳ ಮುಂದುವರಿದ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲು ಉಕ್ರೇನ್ ಅಧಿಕಾರಿಗಳನ್ನು ಪ್ರಧಾನಿ ವಿನಂತಿಸಿದ್ದಾರೆ. 

ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕೆಂಬ ತಮ್ಮ ಕರೆಯನ್ನು ಪ್ರಧಾನಿ ಮೋದಿ ಬಲವಾಗಿ ಪುನರುಚ್ಚರಿಸಿದ್ದು, ತಮ್ಮ ಭಿನ್ನಾಭಿಪ್ರಾಯಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉಭಯ ದೇಶಗಳು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳಬೇಕು ಎಂದು ಹೇಳಿದ್ದಾರೆ.

ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ತಿಳಿಸಿದ್ದು, ಯುದ್ಧ ಪೀಡಿತ ನಾಗರಿಕರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುವ ಭಾರತದ ಬದ್ಧತೆಯ ಭರವಸೆ ನೀಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT