ಹೈದರಾಬಾದ್: ಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಬಿಜೆಪಿ ಮತ್ತು ಪ್ರಕರಣದ ಆರೋಪಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡಿದೆ.
ಪ್ರಕರಣದ ತನಿಖೆಗೆ ತೆಲಂಗಾಣ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು. ಅರ್ಜಿದಾರರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲು ಆದೇಶಿಸಿದೆ.
ತೆಲಂಗಾಣ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದುವರೆಗೆ ಮೂವರು ಪ್ರಮುಖ ಆರೋಪಿಗಳಾದ ರಾಮಚಂದ್ರ ಭಾರತಿ, ಸಿಂಹಯಾಜಿ ಮತ್ತು ನಂದುಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ. ನಂತರ ಈ ಆರೋಪಿಗಳು ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.