ಸಂಗ್ರಹ ಚಿತ್ರ 
ದೇಶ

ಕೋವಿಡ್-19 ರೂಪಾಂತರಿ ಭೀತಿ: ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂದು 'ಅಣಕು ಕಾರ್ಯಾಚರಣೆ', ಏನಿದು ಮಾಕ್‌ ಡ್ರಿಲ್?

ನೆರೆಯ ಚೀನಾದಲ್ಲಿ ಕೋವಿಡ್ ಮಹಾಮಾರಿ ಮರಣ ಮೃದಂಗ ಭಾರಿಸುತ್ತಿರುವಂತೆಯೇ ಇತ್ತ ದೇಶದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಅಲೆ ಆತಂಕ ಆವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣಾ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಬೆಂಗಳೂರು: ನೆರೆಯ ಚೀನಾದಲ್ಲಿ ಕೋವಿಡ್ ಮಹಾಮಾರಿ ಮರಣ ಮೃದಂಗ ಭಾರಿಸುತ್ತಿರುವಂತೆಯೇ ಇತ್ತ ದೇಶದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಅಲೆ ಆತಂಕ ಆವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣಾ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಹೌದು.. ದೇಶದಲ್ಲಿ ಮತ್ತೆ ಕೋವಿಡ್ ಅಲೆ ಆತಂಕ ಸೃಷ್ಟಿಯಾಗಿದ್ದು, ಡಿಸೆಂಬರ್22 ರಂದು 16 ಸೋಂಕಿತರು ಪತ್ತೆಯಾಗಿದ್ದರು. ಡಿಸೆಂಬರ್23 ರಂದು 10 ಸೋಂಕಿತರು ಪತ್ತೆ, ಡಿಸೆಂಬರ್ 24 ರಂದು 19 ಸೋಂಕಿತರು ಪತ್ತೆ, ಡಿಸೆಂಬರ್ 25 ರಂದು 22 ಸೋಂಕಿತರು ಪತ್ತೆ ಹೀಗೆ ಸೋಂಕಿತರ ಸಂಖ್ಯೆಯಲ್ಲಿ ಸಣ್ಣ ಪ್ರಮಾಣದಲ್ಲಿ‌ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಒಮಿಕ್ರಾನ್​ ರೂಪಾಂತರಿ ತಳಿ BF.7 ಭೀತಿ ಹಿನ್ನೆಲೆ ರೂಪಾಂತರಿ ತಳಿ BF.7 ಎದುರಿಸಲು ಆರೋಗ್ಯ ಇಲಾಖೆ ಸಜ್ಜಾಗುತ್ತಿದ್ದು, ಇದರ ಮೊದಲ ಹೆಜ್ಜೆಯಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಪ್ರಮುಖ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸುತ್ತಿದೆ. 

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಕೆ.ಸಿ.ಜನರಲ್​ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸಿ.ವಿ.ರಾಮನ್​ನಗರ ಆಸ್ಪತ್ರೆ, ​ESI ಆಸ್ಪತ್ರೆ ಸೇರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾಕ್​ ಡ್ರಿಲ್​​​​​​​ ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಬೆಡ್‌ಗಳ ಸಿದ್ಧತೆ, ಔಷಧಗಳ ಪರಿಶೀಲನೆ ನಡೆಸಿ ಮಾಹಿತಿ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ. ಆಕ್ಸಿಜನ್ ಪ್ಲಾಂಟ್‌ಗಳಲ್ಲಿ ಡ್ರೈರನ್ ಮಾಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಕ್ಸಿಜನ್ ಪ್ಲಾಂಟ್‌ಗಳು ಸರಿಯಾಗಿವೆಯೇ ಎಂದು ಪರೀಶಿಲನೆ ನಡೆಸಲಾಗುತ್ತಿದೆ.

ಈ ಹಿಂದೆ ಸರಿಯಾದ ಮಾಹಿತಿ ಹಾಗೂ ಆಕ್ಸಿಜನ್ ಕೊರತೆಯಿಂದ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಕ್ಕಿರಲಿಲ್ಲ. ಆದ್ರೀಗ ರೂಪಾಂತರಿ ಆತಂಕ ಇರೋದ್ರಿಂದ ಮಾಕ್ ಡ್ರಿಲ್ ಮಾಡಲು ಇಲಾಖೆ ಮುಂದಾಗಿದೆ. ಈ ಮಾಕ್ ಡ್ರಿಲ್‌ನಲ್ಲಿ ಆಯಾ ಆಸ್ಪತ್ರೆಗಳಿಗೆ ಬೇಕಿರೋ ಸೌಲಭ್ಯಗಳ ಬಗ್ಗೆ ಮನವಿ ಮಾಡಲಾಗುವುದು. ಮುಖ್ಯವಾಗಿ ಹೆಲ್ತ್ ಎಮರ್ಜೆನ್ಸಿ ಸೃಷ್ಟಿಯಾಗದಂತೆ ನೋಡಿಕೊಳ್ಳಲು ತಯಾರಿ ನಡೆಸಲಾಗುತ್ತಿದೆ.

ಮಾಕ್ ಡ್ರಿಲ್
ಹೊಸ ವರ್ಷದ ಆಗಮನ ಹಾಗೂ ಸಂಬಂಧಿತ ಆಚರಣೆಗಳು- ಪಾರ್ಟಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ನಿಯಮಾವಳಿಗಳನ್ನು ತರಲು ಸರ್ಕಾರ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ʼಮಾಕ್‌ ಡ್ರಿಲ್‌ʼ ಅಥವಾ ʻಅಣಕು ಕಾರ್ಯಾಚರಣೆʼಯನ್ನು ಕೂಡ ಮಾಡಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ದೇಶಾದ್ಯಂತ ಇಂದು ಮಾಕ್‌ ಡ್ರಿಲ್‌ಗೆ ಕರೆ ನೀಡಿದ್ದಾರೆ. ʼʼಸಾಂಕ್ರಾಮಿಕವನ್ನು ಎದುರಿಸುವಲ್ಲಿ ನಮ್ಮ ಈ ಹಿಂದಿನ ಅನುಭವದ ಆಧಾರದಲ್ಲಿ ಕೆಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮಾಕ್‌ ಡ್ರಿಲ್‌ ಅವುಗಳಲ್ಲಿ ಒಂದು. ಇದು ನಮ್ಮ ಸಿದ್ಧತೆ ಎಷ್ಟು ಎಂದು ಪರಿಶೀಲಿಸಲು ನೆರವಾಗುತ್ತದೆ. ಇದು ನಮ್ಮ ಕೊರತೆಗಳನ್ನು ಕಂಡುಕೊಳ್ಳಲು, ಅವುಗಳನ್ನು ಸರಿಪಡಿಸಲು ನೆರವಾಗಲಿದೆʼʼ ಎಂದಿದ್ದಾರೆ.

ಏನು ಈ ಮಾಕ್‌ ಡ್ರಿಲ್‌ ಅಂದರೆ?
ನಿಗದಿಪಡಿಸಲಾದ ಆಸ್ಪತ್ರೆಗೆ ಅಣಕು ರೋಗಿಯನ್ನು ದಾಖಲಿಸಿ, ಪ್ರಾಥಮಿಕ ಚಿಕಿತ್ಸೆಯಿಂದ ಹಿಡಿದು ಆಕ್ಸಿಜನ್‌, ಐಸಿಯುವರೆಗೂ ಎಲ್ಲ ಪ್ರಕ್ರಿಯೆಗಳನ್ನು ನೆರವೇರಿಸುವ ಮೂಲಕ ಈ ಕಾರ್ಯಾಚರಣೆ ನಡೆಯುತ್ತದೆ. ಎಲ್ಲಾ ಜಿಲ್ಲೆಗಳ ಆರೋಗ್ಯ ಸೌಲಭ್ಯಗಳ ಲಭ್ಯತೆ, ಪ್ರತ್ಯೇಕ ಹಾಸಿಗೆಗಳ ಸಾಮರ್ಥ್ಯ, ಆಮ್ಲಜನಕ ಸೌಲಭ್ಯವಿರುವ ಹಾಸಿಗೆಗಳು, ಐಸಿಯು ಹಾಸಿಗೆಗಳು, ವೆಂಟಿಲೇಟರ್ ಬೆಂಬಲಿತ ಹಾಸಿಗೆಗಳು, ವೈದ್ಯರು, ದಾದಿಯರು, ಅರೆವೈದ್ಯರು, ಆಯುಷ್ ವೈದ್ಯರ ಅತ್ಯುತ್ತಮ ಲಭ್ಯತೆ ಮುಂತಾದ ಅಂಶಗಳನ್ನು ಆಧರಿಸಿ ಈ ಕಾರ್ಯಾಚರಣೆ ನಡೆಯುತ್ತದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರ ಮುಂಚೂಣಿ ಕಾರ್ಯಕರ್ತರು ಕೂಡ ಇದರಲ್ಲಿ ಪಾಲ್ಗೊಳ್ಳುತ್ತಾರೆ.

COVID-19 ನಿರ್ವಹಣೆಯಲ್ಲಿ ತರಬೇತಿ ಪಡೆದ ಆರೋಗ್ಯ ವೃತ್ತಿಪರರು, ತೀವ್ರತರವಾದ ಪ್ರಕರಣಗಳಿಗೆ ವೆಂಟಿಲೇಟರಿ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್‌ನಲ್ಲಿ ತರಬೇತಿ ಪಡೆದ ಆರೋಗ್ಯ ವೃತ್ತಿಪರರು, ಆಮ್ಲಜನಕ ತಯಾರಿ ಸ್ಥಾವರಗಳ ಕಾರ್ಯಾಚರಣೆಯಲ್ಲಿ ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರು ಇತ್ಯಾದಿ ಸುಧಾರಿತ ಮತ್ತು ಮೂಲಭೂತ ಮಾನವ ಸಂಪನ್ಮೂಲ ಸಾಮರ್ಥ್ಯದ ಮೇಲೂ ಈ ಕಾರ್ಯಾಚರಣೆ ಕೇಂದ್ರೀಕರಿಸುತ್ತದೆ. ಜೀವರಕ್ಷಕ ಆಂಬ್ಯುಲೆನ್ಸ್‌ಗಳು, ಪರೀಕ್ಷಾ ಉಪಕರಣಗಳು, ಅಗತ್ಯ ಔಷಧಗಳನ್ನೂ ಪರಿಶೀಲಿಸುತ್ತದೆ.

ಮಾಕ್ ಡ್ರಿಲ್ ನ ಪ್ರಯೋಜನವೇನು?
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಆರೋಗ್ಯ ತುರ್ತುಪರಿಸ್ಥಿತಿ ಅಗತ್ಯ ಪೂರೈಸಲು ಅಗತ್ಯವಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಜಾರಿಗೆ ತರುವುದು ಅವಶ್ಯಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಒತ್ತಿ ಹೇಳಿದೆ. “ಈ ಕಾರ್ಯಾಚರಣೆಯ ಉದ್ದೇಶ ಕೋವಿಡ್ ನಿರ್ವಹಣೆಗಾಗಿ ಆರೋಗ್ಯ ಸೌಲಭ್ಯಗಳ ಸಿದ್ಧತೆಯನ್ನು ಖಚಿತಪಡಿಸುವುದು” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ಇನ್ನು ಸೋಮವಾರ ಚೀನಾದಿಂದ ಬಂದ ಇಬ್ಬರು ಪ್ರಯಾಣಿಕರಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಆಗ್ರಾ ಹಾಗೂ ಬೆಂಗಳೂರಿನಲ್ಲಿ ವರದಿಯಾಗಿವೆ. ಇವರ ಮಾದರಿಗಳನ್ನು ಜೀನೋಮ್‌ ಪರೀಕ್ಷೆಗೆ ಕಳುಹಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಹೀನಾಯ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!

WPL Auction 2026: ಬರೋಬ್ಬರಿ 3.2 ಕೋಟಿ ರೂ. ಗೆ ಆಲ್ ರೌಂಡರ್ ದೀಪ್ತಿ ಶರ್ಮಾ ಸೋಲ್ಡೌಟ್‌! ಸ್ಟನ್ ಆದ ಗಂಗೂಲಿ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

SCROLL FOR NEXT