ದೇಶ

ಕಾಶ್ಮೀರ: 'ಭಾರತ್ ಜೋಡೋ ಯಾತ್ರೆ'ಯಲ್ಲಿ ಮೆಹಬೂಬಾ ಮುಫ್ತಿ ಭಾಗಿ

Lingaraj Badiger

ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ "ಭಾರತ್ ಜೋಡೋ ಯಾತ್ರೆ"ಯಲ್ಲಿ ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ.

"ಇಂದು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ನನಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ವ್ಯಕ್ತಿಗಳೊಂದಿಗೆ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಉತ್ತಮ ಭಾರತದತ್ತ ತಮ್ಮ ನಡಿಗೆ'' ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸಹ ಭಾರತ್ ಜೋಡೋ ಯಾತ್ರೆ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿದಾಗ ಪಾಲ್ಗೊಳ್ಳುವ ಸಾಧ್ಯತೆ ಇದೆ.

SCROLL FOR NEXT