ಉತ್ತರಪ್ರದೇಶ: ಮನೆಗೆ ಹೊತ್ತಿಕೊಂಡ ಬೆಂಕಿ, ಒಂದೇ ಕುಟುಂಬದ ಐವರು ಸಜೀವ ದಹನ
ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೌ (ಉತ್ತರಪ್ರದೇಶ): ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಅಡುಗೆ ಮನೆಯ ಸ್ಟೌನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಇದರಿಂದ ಮನೆಯೊಳಗಿದ್ದ ಮಹಿಳೆ, ಪುರುಷ, 3 ಅಪ್ರಾಪ್ತ ವಯಸ್ಸಿನ ಮಕ್ಕಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊರಬರಲಾಗದೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ತಿಳಿದ ಬಳಿಕ ಅಗ್ನಿಶಾಮಕ ದಳ, ವೈದ್ಯಕೀಯ ಸಿಬ್ಬಂದಿಯೊಂದಿಗೆ ಪೊಲೀಸ್ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ.
ಬೆಂಕಿಯನ್ನು ನಂದಿಸಿ ಮೃತದೇಹಗಳನ್ನು ಮನೆಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರವಾಗಿ ತಲಾ 4 ಲಕ್ಷ ರೂಪಾಯಿ ನೆರವು ನೀಡುವುದಾಗಿ ಸರ್ಕಾರ ಘೋಷಿಸಿದೆ.