ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರಾದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕ ರಾಜೀನಾಮೆ

ಭಾರತೀಯ ಜನತಾ ಪಕ್ಷದ ಶಾಸಕ ದಿಬಚಂದ್ರ ಹ್ರಾಂಗ್‌ಖಾವಲ್ ಅವರು ಬುಧವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ವರ್ಷ ಕೇಸರಿ ಪಕ್ಷದ ತ್ಯಜಿಸಿದ ಆಡಳಿತಾರೂಢ ಮೈತ್ರಿಕೂಟದ ಏಳನೇ ಶಾಸಕರಾಗಿದ್ದಾರೆ.

ತ್ರಿಪುರಾ: ಭಾರತೀಯ ಜನತಾ ಪಕ್ಷದ ಶಾಸಕ ದಿಬಚಂದ್ರ ಹ್ರಾಂಗ್‌ಖಾವಲ್ ಅವರು ಬುಧವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ವರ್ಷ ಕೇಸರಿ ಪಕ್ಷದ ತ್ಯಜಿಸಿದ ಆಡಳಿತಾರೂಢ ಮೈತ್ರಿಕೂಟದ ಏಳನೇ ಶಾಸಕರಾಗಿದ್ದಾರೆ.

ಧಲೈನಲ್ಲಿರುವ ಕರಮ್‌ಚೆರ್ರಾದ ಬುಡಕಟ್ಟು ಶಾಸಕರಾದ ಹ್ರಾಂಗ್‌ಖಾವಲ್ ಅವರು ತ್ರಿಪುರಾ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ವೈಯಕ್ತಿಕ ಕಾರಣಗಳನ್ನು ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸ್ಪೀಕರ್ ರತನ್ ಚಕ್ರವರ್ತಿ ಅವರು ಲಭ್ಯವಿಲ್ಲದ ಕಾರಣ ವಿಧಾನಸಭೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ದಿಬಚಂದ್ರ ಹ್ರಾಂಗ್‌ಖಾವಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹ್ರಾಂಗ್‌ಖಾವಲ್ ಅವರು 2018ರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರಿದ್ದರು. 

"ನಾನು ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ ರಾಜಕೀಯ ವ್ಯಕ್ತಿಯಾಗಿರುವುದರಿಂದ ನಾನು ರಾಜಕೀಯದಲ್ಲಿಯೇ ಉಳಿಯುತ್ತೇನೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ