ರಾಹುಲ್ ಗಾಂಧಿ 
ದೇಶ

ನನ್ನ ಪ್ರೀತಿ, ಬೆಂಬಲ ನಿಮ್ಮೊಂದಿಗಿದೆ: ಪ್ರಧಾನಿ ಮೋದಿ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ರಾಹುಲ್

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಗುಜರಾತ್ ನ ಅಹಮದಾಬಾದ್​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಶೀಘ್ರ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಗುಜರಾತ್ ನ ಅಹಮದಾಬಾದ್​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.

"ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದದ್ದು. ಈ ಕಷ್ಟದ ಸಮಯದಲ್ಲಿ ಮೋದಿಜಿ, ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ(100) ಅವರನ್ನು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

"ಪ್ರಧಾನಿ ಮೋದಿ ಅವರ ತಾಯಿ ಅಸ್ವಸ್ಥರಾಗಿದ್ದಾರೆ ಎಂಬ ಸುದ್ದಿ ನಮಗೆ ಬಂದಿದೆ. ಈ ಸಮಯದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟ್ವೀಟ್ ಮಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆರೋಗ್ಯವಾಗಿರಬೇಕು ಎಂದು ನಾವು ಬಯಸುತ್ತೇವೆ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ

ಕದ್ದ ರಾಮ ಮಂದಿರ ದೇಣಿಗೆ ಹಣ ಷೇರುಗಳಲ್ಲಿ ಹೂಡಿಕೆ: 30 ಬ್ಯಾಂಕ್ ಖಾತೆಗಳ ಸ್ಥಗಿತ, ತನಿಖೆಯಿಂದ ಆಘಾತಕಾರಿ ಮಾಹಿತಿ ಬಹಿರಂಗ !

ಅಮೆರಿಕಾ ಅಧ್ಯಕ್ಷನ ಹತ್ಯೆಗೆ Iran ಭಾರೀ ಸಂಚು? Israel ರಹಸ್ಯ ಮಾಹಿತಿ; ಕೊನೆ ಕ್ಷಣದಲ್ಲಿ ವಿಮಾನ ಬದಲಿಸಿ 'Air Force One'ನಲ್ಲೇ ಪ್ರಯಾಣಿಸಿದ Trump..!

ಮಂತ್ರಿಗಿರಿ ರಹಸ್ಯ?: ಸಿಎಂ DK Shivakumar ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!

ಸಿದ್ದು ಆಶೀರ್ವಾದದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುನ್ನೆಲೆಗೆ..!