ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಾಯಿ ಹೀರಾಬೆನ್ ಆರೋಗ್ಯ ವಿಚಾರಿಸಲು ಅಹಮದಾಬಾದ್ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ.

ತಾಯಿಯೊಂದಿಗೆ ಪ್ರಧಾನಿ ಮೋದಿ
Lingaraj Badiger
Updated On : 28 Dec 2022, 4:23 pm

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ.

ಇಂದು ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಗುಜರಾತ್ ನ ಅಹಮದಾಬಾದ್​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ: ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Advertisement

Advertisement

ಪ್ರಧಾನಿ ಮೋದಿ ಅವರು ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ತಕ್ಷಣ ಅಹಮದಾಬಾದ್ ಗೆ ಆಗಮಿಸಿ, ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. 

ಇನ್ನು ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಲವು ಸಚಿವರು, ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ಬಗ್ಗೆ ವಿಚಾರಿಸುತ್ತಿದ್ದಾರೆ.

ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement