ಸಾಂದರ್ಭಿಕ ಚಿತ್ರ 
ದೇಶ

ಚೀನಾ ಸೇರಿ 6 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ...

ನವದೆಹಲಿ: ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುರುವಾರ ಘೋಷಿಸಿದ್ದಾರೆ. 

ಈ ಐದು ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ತಮ್ಮ ಆರ್ ಟಿ-ಪಿಸಿಆರ್ ವರದಿಗಳನ್ನು ಏರ್ ಸುವಿಧಾ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಪರೀಕ್ಷಿಸಲಾದ 6,000 ಮಂದಿಯಲ್ಲಿ ಕನಿಷ್ಠ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಹಿಂದಿನ ಟ್ರೆಂಡ್‌ಗಳನ್ನು ಉಲ್ಲೇಖಿಸಿ, ಮುಂದಿನ 40 ದಿನಗಳು ನಿರ್ಣಾಯಕವಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಭಾರತದಲ್ಲಿ ಜನವರಿಯಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣವಾಗಬಹುದು ಎನ್ನಲಾಗಿದೆ.

"ಹಿಂದೆ, ಕೋವಿಡ್-19ರ ಹೊಸ ಅಲೆಯು ಪೂರ್ವ ಏಷ್ಯಾದಲ್ಲಿ ಕಾಣಿಸಿಕೊಂಡ ಸುಮಾರು 30-35 ದಿನಗಳ ನಂತರ ಭಾರತ ಉಲ್ಬಣಗೊಂಡಿತ್ತು. ಹೀಗಾಗಿ ಇದು ಒಂದು ಪ್ರವೃತ್ತಿಯಾಗಿದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT