ಪಕ್ಷದಲ್ಲಿ ಭಿನ್ನಮತದ ನಡುವೆ ಬಿಹಾರ ಉಪಾಧ್ಯಕ್ಷ ರಾಜೀಬ್ ರಂಜನ್ ರನ್ನು ವಜಾಗೊಳಿಸಿದ ಬಿಜೆಪಿ
ಬಿಹಾರ ಬಿಜೆಪಿ ಉಪಾಧ್ಯಕ್ಷ ರಾಜೀಬ್ ರಂಜನ್ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಶುಕ್ರವಾರ ತಿಳಿಸಿದೆ. ಇದು ರಾಜ್ಯದಲ್ಲಿ ಪಕ್ಷ ಅಧಿಕಾರ ಕಳೆದುಕೊಂಡ ನಂತರ ಸ್ಫೋಟಗೊಂಡ ಭಿನ್ನಮತದ ಸಂಕೇತವಾಗಿದೆ.
ಪಾಟ್ನಾ: ಬಿಹಾರ ಬಿಜೆಪಿ ಉಪಾಧ್ಯಕ್ಷ ರಾಜೀಬ್ ರಂಜನ್ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ವಜಾಗೊಳಿಸಲಾಗಿದೆ ಎಂದು ಬಿಜೆಪಿ ಶುಕ್ರವಾರ ತಿಳಿಸಿದೆ. ಇದು ರಾಜ್ಯದಲ್ಲಿ ಪಕ್ಷ ಅಧಿಕಾರ ಕಳೆದುಕೊಂಡ ನಂತರ ಸ್ಫೋಟಗೊಂಡ ಭಿನ್ನಮತದ ಸಂಕೇತವಾಗಿದೆ.
ರಂಜನ್ ಅವರು ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡ ಬೆನ್ನಲ್ಲೇ, ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.
ರಂಜನ್ ಅವರು 'ಮೌಖಿಕವಾಗಿ ನೀಡಿದ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಜೈಸ್ವಾಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
'ನಿಮ್ಮ ಮಾತುಗಳು ರಾಜ್ಯ ಉಪಾಧ್ಯಕ್ಷರಿಗೆ ತಕ್ಕುದಲ್ಲ ಮತ್ತು ಪಕ್ಷದ ಪ್ರತಿಷ್ಠೆಯ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಈ ಮೂಲಕ ನಿಮ್ಮನ್ನು ಉಪಾಧ್ಯಕ್ಷ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಮತ್ತು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿದೆ' ಎಂದು ಜೈಸ್ವಾಲ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.