ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ತಮ್ಮ ತಾಯಿ ನಿಧನ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ರದ್ದುಗೊಳಿಸದಂತೆ ಪ್ರಧಾನಿ ಸೂಚನೆ: ರಾಜನಾಥ್ ಸಿಂಗ್

ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿಧನದ ಹಿನ್ನೆಲೆಯಲ್ಲಿ ಯಾವುದೇ ಪೂರ್ವ ನಿಗದಿತ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ...

ತಿರುವನಂತಪುರಂ: ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿಧನದ ಹಿನ್ನೆಲೆಯಲ್ಲಿ ಯಾವುದೇ ಪೂರ್ವ ನಿಗದಿತ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ತಿರುವನಂತಪುರಂನ ವರ್ಕಲಾದಲ್ಲಿ 90ನೇ ಶಿವಗಿರಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ರಾಜನಾಥ್ ಸಿಂಗ್, ಮೊದಲು ಮೋದಿಯವರ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದರು. ನಿಧನದ ಸುದ್ದಿ ಕೇಳಿದ ನಂತರ ಕಾರ್ಯಕ್ರಮ ರದ್ದುಗೊಳಿಸಿ ದೆಹಲಿಗೆ ತೆರಳಲು ಸಿದ್ಧನಾಗಿದ್ದೆ ಎಂದು ಹೇಳಿದರು.

"ಆದರೆ ಯಾರೂ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಬಾರದು ಮತ್ತು ಅವುಗಳಲ್ಲಿ ಭಾಗವಹಿಸಿದ ನಂತರವೇ ಹಿಂತಿರುಗಬೇಕೆಂದು ಪ್ರಧಾನಿ ಸೂಚಿಸಿದ್ದಾರೆ" ಎಂದು ರಾಜನಾಥ್ ಸಿಂಗ್ ತಿಳಿಸಿದರು. 

ಹೀರಾಬೆನ್ ಮೋದಿ ಅವರು ಇಂದು ಬೆಳಗಿನ ಜಾವ ಗಾಂಧಿನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರಧಾನಿ ಮೋದಿ ಅವರು ತಮ್ಮ ತಾಯಿಯ ಅಂತ್ಯಕ್ರಿಯೆ ಮುಗಿಸಿ ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. 

ಪ್ರಧಾನಿ ಮೋದಿ ತಮ್ಮ ತಾಯಿಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಹೌರಾ ಮತ್ತು ನ್ಯೂ ಜಲ್ಪೈಗುರಿ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಅಲ್ಲದೆ ವೀಡಿಯೊ ಕಾನ್ಫರೆನ್ಸ್ ಮೂಲಕ ಎರಡು ಬ್ಯಾಕ್-ಟು-ಬ್ಯಾಕ್ ಸಭೆಗಳಲ್ಲಿ ಭಾಗವಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT