ದೇಶ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನ: ಸಂತಾಪ ಸೂಚಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡೆನ್

Ramyashree GN

ನವದೆಹಲಿ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರು ಶನಿವಾರ ಸಂತಾಪ ಸೂಚಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜೋ ಬೈಡೆನ್ ಅವರು, 'ಜಿಲ್ ಮತ್ತು ನಾನು ಅವರ ತಾಯಿ ಹೀರಾಬೆನ್ ಅವರನ್ನು ಕಳೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ಆಳವಾದ ಮತ್ತು ಹೃತ್ಪೂರ್ವಕ ಸಂತಾಪವನ್ನು ಕಳುಹಿಸುತ್ತೇವೆ' ಎಂದು ಬರೆದಿದ್ದಾರೆ.

'ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಪ್ರಧಾನಿ ಮತ್ತು ಅವರ ಕುಟುಂಬದೊಂದಿಗೆ ಇವೆ' ಎಂದು ಅವರು ಹೇಳಿದರು.

ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ಕೂಡ ಹೀರಾಬೆನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಅವರ ಪ್ರೀತಿಯ ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಳವಾದ ಸಂತಾಪಗಳು. ನಮ್ಮ ಹೃದಯಗಳು ದುಃಖಿತ ಕುಟುಂಬದೊಂದಿಗೆ ನಿಲ್ಲುತ್ತವೆ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಶುಕ್ರವಾರ ಸಂತಾಪ ಸೂಚಿಸಿದ್ದು, 'ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ. ಅವರ ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರಿಗೆ ನನ್ನ ಸಂತಾಪಗಳು' ಎಂದಿದ್ದಾರೆ.

ಗುರುವಾರ ಬೆಳಗಿನ ಜಾವ 3.30ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ವಿಧಿವಶರಾಗಿದ್ದರು. ಬುಧವಾರ ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಗುಜರಾತ್ ತಲುಪಿದ ಪ್ರಧಾನಿ ಮೋದಿ, ತಮ್ಮ ತಾಯಿಯ ರೇಸನ್ ನಿವಾಸದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ನಂತರ ಅಂತಿಮ ಸಂಸ್ಕಾರಕ್ಕಾಗಿ ಅವರ ಪಾರ್ಥಿವ ಶರೀರವನ್ನು ಹೊತ್ತು ಸಾಗಿದರು.

ಹೀರಾಬೆನ್ ಅವರ ಅಂತಿಮ ಸಂಸ್ಕಾರಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಗುಜರಾತ್ ಕ್ಯಾಬಿನೆಟ್ ಸಚಿವರು ಉಪಸ್ಥಿತರಿದ್ದರು.

SCROLL FOR NEXT