ವಿದೇಶಾಂಗ ಸಚಿವ ಜೈಶಂಕರ್. 
ದೇಶ

ನೆರೆ ರಾಷ್ಟ್ರದೊಂದಿಗೆ ಭಾರತ ಉತ್ತಮ ಸಂಬಂಧ ಬಯಸುತ್ತದೆ, ಭಯೋತ್ಪಾದನೆ ಎಂದಿಗೂ ಕ್ಷಮಿಸಲ್ಲ: ವಿದೇಶಾಂಗ ಸಚಿವ ಜೈಶಂಕರ್

ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ. ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವುದೇ ರಾಷ್ಟ್ರ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ. ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವುದೇ ರಾಷ್ಟ್ರ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಹೇಳಿದ್ದಾರೆ.

ಜೈಶಂಕರ್ ಅವರು ಶುಕ್ರವಾರ ಸೈಪ್ರಸ್‌ಗೆ ಭೇಟಿ ನೀಡಿದ್ದು, ಅಲ್ಲಿನ ಭಾಷಣದ ವೇಳೆ ಅವರು ನೆರೆಯ ಪಾಕಿಸ್ತಾನ ಹಾಗೂ ಚೀನಾ ದೇಶಗಳಿಗೆ ತಿರುಗೇಟು ನಿಡಿದ್ದಾರೆ.

ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ನಾವು ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಈ ವಿಷಯದ ಬಗ್ಗೆ ಯಾವುದೇ ರಾಜಿಯಿಲ್ಲ ಎಂದು ಒತ್ತಿ ಹೇಳಿದರು.

ಚೀನಾದೊಂದಿಗಿನ ಗಡಿ ಸಮಸ್ಯೆಗಳ ಕುರಿತು ಮಾತನಾಡಿದ ಜೈಶಂಕರ್, ಕೋವಿಡ್ ಸಮಯದಲ್ಲಿ ಸವಾಲುಗಳು ತೀವ್ರಗೊಂಡಿವೆ. ಚೀನಾದೊಂದಿಗಿನ ನಮ್ಮ ಸಂಬಂಧಗಳು ಸಾಮಾನ್ಯವಾಗಿಲ್ಲ. ಅರುಣಾಚಲದ ತವಾಂಗ್ ಸೆಕ್ಟರ್‌ನಲ್ಲಿ ಚೀನಾ ಮತ್ತು ಭಾರತೀಯ ಸೈನಿಕರು ಘರ್ಷಣೆ ನಡೆಸಿದ ದಿನಗಳ ಬಳಿಕ ನಮ್ಮ ಗಡಿಯಲ್ಲಿ ನಮಗೆ ಸವಾಲುಗಳಿವೆ. ಅದು ಕೋವಿಡ್ ಸಮಯದಲ್ಲಿ ತೀವ್ರಗೊಂಡಿದೆ ಎಂದು ತಿಳಿಸಿದರು.

ಚೀನಾದೊಂದಿಗಿನ ಸಂಬಂಧಗಳು ಸಾಮಾನ್ಯವಾಗಿಲ್ಲ ಏಕೆಂದರೆ ಎಲ್‌ಎಸಿ ಪ್ರದೇಶವನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!