ಪ್ರಿಯಾಂಕಾ ವಾದ್ರಾ 
ದೇಶ

ಉತ್ತರ ಪ್ರದೇಶ: ಎಲ್ಲಾ ಕಡೆ ನನ್ನ ಮುಖ ತಾನೇ ಕಾಣ್ತಿದೆ; ಸಿಎಂ ಅಭ್ಯರ್ಥಿ ತಾನೇ ಎಂಬ ಸುಳಿವು ಕೊಟ್ಟರಾ ಪ್ರಿಯಾಂಕಾ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ನೀವೂ ಎಲ್ಲಾದರೂ ಕಾಂಗ್ರೆಸ್ ಪಕ್ಷವನ್ನು ನೋಡಿದ್ದೀರಾ? ಆದರೆ ನೀವು ಎಲ್ಲೆಡೆ ನನ್ನ ಮುಖವನ್ನು ನೋಡಬಹುದು ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗುವ ಕುರುಹನ್ನು ಬಿಟ್ಟುಕೊಟ್ಟಿದ್ದಾರೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ 40% ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು. ಜೊತೆಗೆ ಸಿಎಂ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಮಹಿಳೆಯೊಬ್ಬರನ್ನು ನಾಮನಿರ್ದೇಶನ ಮಾಡಬಹುದು ಎಂಬ ಊಹಾಪೋಹಕ್ಕೂ ಕಾರಣವಾಗಿತ್ತು.

ಕಾಂಗ್ರೆಸ್ ಈ ವರ್ಷ ಯುಪಿಯಲ್ಲಿ ಮಹಿಳಾ ಸಮಸ್ಯೆಗಳನ್ನು ಚುನಾವಣಾ ಯೋಜನೆಯಾಗಿ ತೆಗೆದುಕೊಂಡಿದೆ. ಪ್ರಾಥಮಿಕವಾಗಿ ಮಹಿಳಾ ಕೇಂದ್ರಿತ ಯೋಜನೆಗಳ ಸುತ್ತ ಪ್ರಚಾರಗಳು ಆರಂಭವಾಗಿವೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಿವಿಧ ಪ್ರೋತ್ಸಾಹ ಮತ್ತು ಯೋಜನೆಗಳನ್ನು ಪಕ್ಷವು ಭರವಸೆ ನೀಡಿದೆ.

ಯುಪಿಯ ಮಹಿಳಾ ಮತದಾರರನ್ನು ಓಲೈಸುವ ಸಲುವಾಗಿ ಪಕ್ಷವು ‘ಲಡ್ಕಿ ಹೂ, ಲಾಡ್ ಸಕ್ತಿ ಹೂ’, ಬಟನ್ ಡಬಾವೋ, ಸ್ಕೂಟಿ ಪಾವೋ ಎಂಬ ಅಭಿಯಾನವನ್ನು ಪ್ರಾರಂಭಿಸಿತು. ರಾಜ್ಯದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT