ಅಜ್ಮೀರ್ ದರ್ಗಾ 
ದೇಶ

ಅಜ್ಮೀರ್ ದರ್ಗಾದಲ್ಲಿ 'ಮಹಾ' ಮುಖ್ಯಮಂತ್ರಿ ಶಿಂಧೆ ಪರವಾಗಿ ಚಾದರ್ ಅರ್ಪಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇಂದು ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಖ್ವಾಜಾ ಮೊಯಿನುದ್ದೀನ್ ಹಸನ್ ಚಿಸ್ತಿ ಅವರು ದರ್ಗಾದಲ್ಲಿ ಚಾದರ್ ಅರ್ಪಿಸಿದರು.

ಅಜ್ಮೀರ್: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇಂದು ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಖ್ವಾಜಾ ಮೊಯಿನುದ್ದೀನ್ ಹಸನ್ ಚಿಸ್ತಿ ಅವರು ದರ್ಗಾದಲ್ಲಿ ಚಾದರ್ ಅರ್ಪಿಸಿದರು.

ಖಾದಿಮ್ ಸೈಯದ್ ವಲಿ ಮೊಹಮ್ಮದ್ ನಿಯಾಜಿ ಅವರು ಶಿಂಧೆ ಅವರ ಪರವಾಗಿ ಚಾದರ್ ಮತ್ತು ಹೂವುಗಳೊಂದಿಗೆ ಗರೀಬ್ ನವಾಜ್ ಅವರ ದರ್ಗಾಕ್ಕೆ ಭೇಟಿ ನೀಡಿದರು. ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಖಾದಿಮ್ ನಿಯಾಜಿ ಅವರು, 'ಶಿಂಧೆ ಸಾಹಬ್ ಗರೀಬ್ ನವಾಜ್ ಮೇಲೆ ನಂಬಿಕೆ ಹೊಂದಿದ್ದಾರೆ. ಅವರು ನಿಯಮಿತವಾಗಿ ಇಲ್ಲಿಗೆ ಬರುತ್ತಿದ್ದರು ಎಂದು ಹೇಳಿದರು. ಮುಖ್ಯಮಂತ್ರಿಯಾದ ಮೇಲೆ ಅವರ ಸೂಚನೆಯಂತೆ ಇಂದು ಚಾದರ ಅರ್ಪಿಸಿ ಎಲ್ಲ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಅಲ್ಲದೆ ಯಾವುದೇ ಅಡೆತಡೆಯಿಲ್ಲದೆ ಮಹಾರಾಷ್ಟ್ರ ಸರ್ಕಾರ ರಚನೆಯಾಗಲಿ ಮತ್ತು ಅವರ ನೇತೃತ್ವದಲ್ಲಿ ಮಹಾರಾಷ್ಟ್ರ ಸಂಪೂರ್ಣ ಅಭಿವೃದ್ಧಿಯಾಗಲಿ ಎಂದು ಪ್ರಾರ್ಥಿಸಿದರು.

ಮುಖ್ಯಮಂತ್ರಿ ಶಿಂಧೆ ಅವರು ಶೀಘ್ರದಲ್ಲೇ ಅಜ್ಮೀರ್ ಗೆ ಭೇಟಿ ನೀಡುವ ಬಗ್ಗೆ ಮಾತನಾಡಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!