ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 16,103 ಹೊಸ ಸೋಂಕು ಪ್ರಕರಣಗಳು, 31 ಸಾವು ವರದಿ

Srinivasamurthy VN

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಕುರಿತಂತೆ ಇಂದು ವರದಿ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 4,35,02,429 ರಷ್ಟಾಗಿದ್ದು, ಮೃತಪಟ್ಟ 31 ಮಂದಿ ಸೇರಿದಂತೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,25,199ಕ್ಕೆ ಏರಿಕೆಯಾಗಿದೆ. 

ಇನ್ನು ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711ಕ್ಕೆ ಏರಿಕೆಯಾಗಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.27 ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,76720 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 86.36 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಕಳೆದ 24 ಗಂಟೆಗಳಲ್ಲಿ 10,10,652 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 197.97 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
 

SCROLL FOR NEXT