ಹಿಮಾಚಲ ಪ್ರದೇಶದಲ್ಲಿ ಶಾಲಾ ಬಸ್ ಅಪಘಾತ 
ದೇಶ

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಶಾಲಾ ಬಸ್ ಭೀಕರ ಅಪಘಾತ: ಶಾಲಾ ಮಕ್ಕಳು ಸೇರಿ 16 ಮಂದಿ ಸಾವು, ಹಲವರಿಗೆ ಗಾಯ

ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್‌ಗೆ ಬಳಿ ಸೋಮವಾರ ಬೆಳಗ್ಗೆ ಶಾಲಾ ಬಸ್ಸು ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶ: ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್‌ಗೆ ಬಳಿ ಸೋಮವಾರ ಬೆಳಗ್ಗೆ ಶಾಲಾ ಬಸ್ಸು ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಶಾಲಾ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. 

ಕುಲ್ಲುವಿನಿಂದ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾದಲ್ಲಿ ತೊಡಗಿದೆ ಎಂದು ಕುಲ್ಲು ಜಿಲ್ಲಾಧಿಕಾರಿ ಆಶುತೋಷ್ ಗಾರ್ಗ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ದುರ್ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ನಡೆದಿದೆ. 

ಸಿಎಂ ಕಂಬನಿ: ಕುಲ್ಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ಸು ಅಪಘಾತವಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ತಂಡ ಧಾವಿಸಿದ್ದು ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಕುಟುಂಬಕ್ಕೆ ಸಂತಾಪಗಳು, ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!