ಬಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ಶಿಕ್ಷಕ 
ದೇಶ

ಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು

ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ...

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಅದು ವೈರಲ್ ಆಗುತ್ತಿದೆ.

ಐದು ವರ್ಷದ ಮಗುವನ್ನು ಹೊಡೆಯಲು ಶಿಕ್ಷಕನು ಮೊದಲು ಕಬ್ಬಿನ ಕೋಲು ಬಳಸಿದ್ದು, ಮಗು ನೋವಿನಿಂದ ಅಳುತ್ತಿರುವುದನ್ನ ವಿಡಿಯೋ ತೋರಿಸುತ್ತದೆ. ಹೊಡೆತದ ಪರಿಣಾಮವು ಎಷ್ಟು ಪ್ರಬಲವಾಗಿದೆ ಎಂದರೆ ಕೋಲು ಎರಡು ಭಾಗಗಳಾಗುತ್ತದೆ.

ಕಬ್ಬಿನ ಕೋಲು ಮುರಿದ ನಂತರ, ಶಿಕ್ಷಕನು ವಿದ್ಯಾರ್ಥಿಗೆ ಕೈಯಿಂದ ಹೊಡೆಯಲು ಪ್ರಾರಂಭಿಸುತ್ತಾನೆ ಹಾಗೂ ಬಾಲಕನ ಕೂದಲನ್ನು ಸಹ ಎಳೆಯುತ್ತಾನೆ. ಹುಡುಗ ಏತನ್ಮಧ್ಯೆ, ಅಳುತ್ತಲೇ ಇರುತ್ತಾನೆ ಮತ್ತು  ಹೊಡೆತ ನಿಲ್ಲಿಸುವಂತೆ ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಬಳಿಕ ಬಾಲಕ ನೆಲದ ಮೇಲೆ ಬೀಳುತ್ತಾನೆ, ಆದರೆ ಶಿಕ್ಷಕನು ತನ್ನ ಚಿತ್ರಹಿಂಸೆಯನ್ನು ಮುಂದುವರೆಸುತ್ತಾನೆ. ಈ ವೇಳೆ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಲು ತುಂಬಾ ಹೆದರುತ್ತಾರೆ. ಜಯಾ ಕೋಚಿಂಗ್ ಕ್ಲಾಸ್ ಟ್ಯೂಷನ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.

ಅಮಾನುಷವಾಗಿ ಥಳಿಸಿದ್ದರಿಂದ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಘೋರ ಸ್ಥಿತಿಯ ಬಗ್ಗೆ ತಿಳಿದಾಗ ಸ್ಥಳೀಯರು ಶಿಕ್ಷಕನನ್ನು ಛೋಟು ಎಂದು ಗುರುತಿಸಿದ್ದು, ಅವನನ್ನು ಹಿಡಿದು ಥಳಿಸಿದರು.

ಛೋಟು ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಾರಣ ಈ ರೀತಿ ಮಾಡಿದ್ದಾರೆ ಎಂದು ಕೋಚಿಂಗ್ ಸೆಂಟರ್ ಮಾಲೀಕ ಅಮರಕಾಂತ್ ಕುಮಾರ್ ಹೇಳಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!