ಪ್ರಧಾನಿ ಮೋದಿ 
ದೇಶ

ಪಿಎಂ ಮೋದಿ ಭದ್ರತಾ ಲೋಪ: ಮೋದಿ ಹೆಲಿಕಾಪ್ಟರ್ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಕಪ್ಪು ಬಲೂನ್ ಹಾರಾಟ, ವಿಡಿಯೋ!

ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಪ್ರವಾಸ ವೇಳೆ ಭದ್ರತಾ ಲೋಪವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಬಳಿ ಪ್ರತಿಭಟನಾಕಾರರು ಭದ್ರತಾ ಲೋಪದಿಂದ ಕಪ್ಪು ಬಲೂನ್‌ಗಳು ಹಾರಾಡಿವೆ.

ವಿಜಯವಾಡ(ಆಂಧ್ರ): ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಪ್ರವಾಸ ವೇಳೆ ಭದ್ರತಾ ಲೋಪವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಬಳಿ ಪ್ರತಿಭಟನಾಕಾರರು ಭದ್ರತಾ ಲೋಪದಿಂದ ಕಪ್ಪು ಬಲೂನ್‌ಗಳು ಹಾರಾಡಿವೆ.  

ವಿಜಯವಾಡದಲ್ಲಿ ಪ್ರಧಾನಿ ಮೋದಿಯವರ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿರುವಾಗ ಕಪ್ಪು ಬಲೂನ್‌ಗಳು ಗಗನದತ್ತ ಮುಖಮಾಡಿ ಹಾರಾಡಿದ್ದವು.

ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆದ ವಿಮಾನ ನಿಲ್ದಾಣದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು. ಅವರು ಕಪ್ಪು ಬಲೂನ್‌ಗಳು ಮತ್ತು ಫಲಕಗಳನ್ನು ಹಿಡಿದು ಪ್ರಧಾನಿಯನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗುತ್ತಿದ್ದರು ಎಂದು ವರದಿಯಾಗಿದೆ. ಕಾಂಗ್ರೆಸ್ ಪ್ರತಿಭಟನಾಕಾರರು ಕಪ್ಪು ಬಲೂನ್ ಗಳನ್ನು ಹಾರಿಸಿದ್ದಾರೆನ್ನಲಾಗಿದೆ. ಈ ಸಂಬಂಧ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಭೀಮಾವರಂನಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಯ ವಿಶೇಷ ಕಾರ್ಯಕ್ರಮದಲ್ಲಿ 30 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT