ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,135 ಹೊಸ ಪ್ರಕರಣ, 24 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16 ಸಾವಿರದ 135 ಹೊಸ ಕೋವಿಡ್ ಪ್ರಕರಣ ದಾಖಲಿಸಿದೆ, ಸಕ್ರಿಯ ಪ್ರಕರಣಗಳು 1,13,864 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. 13,958 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16 ಸಾವಿರದ 135 ಹೊಸ ಕೋವಿಡ್ ಪ್ರಕರಣ ದಾಖಲಿಸಿದೆ, ಸಕ್ರಿಯ ಪ್ರಕರಣಗಳು 1,13,864 ಕ್ಕೆ ಏರಿದೆ, 13,958 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 24 ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 0.26 ಪ್ರತಿಶತವನ್ನು ಒಳಗೊಂಡಿವೆ.

ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 1 ಲಕ್ಷದ 13 ಸಾವಿರದ 864 ಆಗಿದೆ. ಇದುವರೆಗೆ ಕೋವಿಡ್ ನಿಂದ ಚೇತರಿಸಿಕೊಂಡು 4 ಕೋಟಿಯ 28 ಲಕ್ಷದ 79 ಸಾವಿರದ 477 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನದಡಿಯಲ್ಲಿ 197.95 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

SCROLL FOR NEXT