ಜಾರಿ ನಿರ್ದೇಶನಾಲಯ 
ದೇಶ

ಹಣ ವರ್ಗಾವಣೆ ಪ್ರಕರಣ: ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ದಾಳಿ!

ದೇಶಾದ್ಯಂತ ಹಲವು ಪ್ರದೆಶಗಳಲ್ಲಿ ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. 

ನವದೆಹಲಿ: ದೇಶಾದ್ಯಂತ ಹಲವು ಪ್ರದೆಶಗಳಲ್ಲಿ ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. 

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಹಾಗೂ ದಕ್ಷಿಣದ ರಾಜ್ಯಗಳೂ ಸೇರಿದಂತೆ ಚೀನಾ ಕಂಪನಿ ಹಾಗೂ ವೀವೋಗೆ ಸಂಬಂಧಿಸಿದ ಸುಮಾರು 40 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆದಿದೆ.
 
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಾಳಿ ನಡೆದಿದ್ದು, ದಾಳಿಯ ಕುರಿತಾಗಿ ವೀವೋ ಈ ವರೆಗೂ ಯಾವ ಪ್ರತಿಕ್ರಿಯೆಯನ್ನೂ ನೀಡಿಲ್ಲ. 

ಸಿಬಿಐ ಸಹ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ
 
ಏಪ್ರಿಲ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ  ಭಾರತದ ಷಿಯೋಮಿ ಟೆಕ್ನಾಲಜಿ ಲಿಮಿಟೆಡ್ ಗೆ ಸೇರಿದ್ದ 5,551.27 ಕೋಟಿ ರೂಪಾಯಿ ಮೊತ್ತವನ್ನು ಬ್ಯಾಂಕ್ ಖಾತೆಗಳಿಂದ ಎಫ್ಇಎಂಎಯ ನಿಬಂಧನೆಗಳಡಿಯಲ್ಲಿ ವಶಪಡಿಸಿಕೊಂಡಿತ್ತು. ಇದಕ್ಕೂ ಮುನ್ನ ಕಂಪನಿಯ ವಿರುದ್ಧ ಅಕ್ರಮ ಬಾಹ್ಯ ಹಣ ರವಾನೆ ಆರೋಪ ಕೇಳಿಬಂದಿತ್ತು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಂಸ್ಥೆ ನಾವು ಸರ್ಕಾರದ ಆದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ್ದು, ನಮ್ಮ ಗೌರವಧನದ ಪಾವತಿಗಳು ಹಾಗೂ ಬ್ಯಾಂಕ್ ಸ್ಟೇಟ್ಮೆಂಟ್ ಗಳು ಸತ್ಯವಾಗಿ, ಕಾನೂನುಬದ್ಧವಾಗಿಯೇ ಇವೆ ಎಂದು ನಂಬುತ್ತೇವೆ ಎಂದು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!

ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ, ನಟಿಗೆ ಅಂತಿಮ ಕರೆ!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!