ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಖುಂಟಿ: ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐಎಎಸ್ ಅಧಿಕಾರಿ ವಿರುದ್ಧ ಖುಂಟಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ 2019 ರ ಬ್ಯಾಚ್‌ನ ಅಧಿಕಾರಿಯನ್ನು ಸೋಮವಾರ ರಾತ್ರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಹೇಳಿದ್ದಾರೆ.

ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಮತ್ತು 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಮಾತು, ಹಾವಭಾವ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿ ಸೇರಿದಂತೆ ಹೊರರಾಜ್ಯದ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಬೇತಿಗಾಗಿ ಖುಂಟಿಯಲ್ಲಿದ್ದರು ಎಂದು ಕುಮಾರ್ ತಿಳಿಸಿದ್ದಾರೆ.

ಕಳೆದ ಶನಿವಾರ ಡೆಪ್ಯುಟಿ ಡೆವಲಪ್‌ಮೆಂಟ್ ಕಮಿಷನರ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಈ ಘಟನೆ ನಡೆದಿದೆ. ಪಾರ್ಟಿಯಲ್ಲಿ, ಐಎಎಸ್ ಅಧಿಕಾರಿ, ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯ ಬಳಿಗೆ ತೆರಳಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಧಿಕಾರಿ ಮತ್ತು ಪಾರ್ಟಿಯಲ್ಲಿ ಭಾಗವಹಿಸಿದ್ದ ಕೆಲವು ಅತಿಥಿಗಳನ್ನು ವಿಚಾರಣೆಗೆ ಒಳಪಡಿಸಿದ ನಂತರ ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡುಬಂದಿದೆ. ಸದ್ಯ ವಿದ್ಯಾರ್ಥಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದ ಅಮನ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ದರೋಡೆ!

ಕಾಂಗ್ರೆಸ್ ಭವನಕ್ಕಾಗಿ ಸರ್ಕಾರಿ ಭೂಮಿ ಗುಳುಂ: ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಹೇಗೆ ಲಭ್ಯವಾಯಿತು? ಸರ್ಕಾರದ ವಿರುದ್ಧ BJP ಗಂಭೀರ ಆರೋಪ

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

SCROLL FOR NEXT