ಉದ್ಧವ್ ಠಾಕ್ರೆ 
ದೇಶ

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್ ಠಾಕ್ರೆಗೆ ಶಿವಸೇನಾ ಸಂಸದ ಒತ್ತಾಯ

ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.

ಮುಂಬೈ: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.

ಉದ್ಧವ್ ಠಾಕ್ರೆಗೆ ಪತ್ರ ಬರೆದಿರುವ  ರಾಹುಲ್ ಶೆವಾಲೆ, ದ್ರೌಪದಿ ಮುರ್ಮು ಅವರ ಬುಡಕಟ್ಟು ಸಮುದಾಯದ ಹಿನ್ನೆಲೆ ಹಾಗೂ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಅವರಿಗೆ ಬೆಂಬಲ ನೀಡಲು ಘೋಷಿಸಬೇಕು ಮತ್ತು ಶಿವಸೇನಾ ಸಂಸದರು ಅದೇ ರೀತಿ ಮಾಡುವಂತೆ ನಿರ್ದೇಶನ ನೀಡಬೇಕು ಎಂದಿದ್ದಾರೆ. 

ಕಳೆದ ವಾರ ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ್ ಆಘಾದಿ ಸರ್ಕಾರ ಪತನ ನಂತರ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ ಬಿಜೆಪಿ ವಿರುದ್ಧ ತಿರುಗಿ ಬಿದಿದ್ದು, ವಾಕ್ ಪ್ರಹಾರ ನಡೆಸುತ್ತಿದೆ.

ಇಂತಹ ಸಂದರ್ಭದಲ್ಲಿ ರಾಹುಲ್ ಶೆವಾಲ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಯಾರನ್ನು ಬೆಂಬಲಿಸಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಶಿವಸೇನೆ ಲೋಕಸಭೆಯಲ್ಲಿ 18 ಸದಸ್ಯರು ಹಾಗೂ ರಾಜ್ಯಸಭೆಯಲ್ಲಿ ಮೂವರು ಸದಸ್ಯರನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ