ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಇಬ್ಬರು ಸ್ಥಳೀಯ ಉಗ್ರರು ಪೊಲೀಸರ ಮುಂದೆ ಶರಣು

Sumana Upadhyaya

ಕುಲ್ಗಾಮ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಡಿಗಮ್ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿಯಿಂದ ಆರಂಭವಾದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಪೊಲೀಸರ ಮುಂದೆ ಶರಣಾಗಿದ್ದಾರೆ. 

ಪೊಲೀಸರು ಮತ್ತು ಭದ್ರತಾ ಪಡೆ ಎನ್ ಕೌಂಟರ್ ಆರಂಭಿಸಿದ ನಂತರ ಎನ್ ಕೌಂಟರ್ ನಡೆಯಿತು. ನಂತರ ಇಬ್ಬರು ಸ್ಥಳೀಯ ಉಗ್ರರು ಅವರ ಪೋಷಕರು ಮತ್ತು ಪೊಲೀಸರ ಮನವಿ ಮೇರೆಗೆ ಪೊಲೀಸರ ಮುಂದೆ ಶರಣಾಗಿದ್ದಾರೆ. ಅವರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಆ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಮೊದಲು ಎನ್‌ಕೌಂಟರ್ ಪ್ರಾರಂಭವಾಯಿತು. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದವು. ಅಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಭದ್ರತಾ ಪಡೆಗಳಿಂದ ಪ್ರತಿದಾಳಿಯಿಂದ ಗುಂಡು ಹಾರಿಸಲು ಪ್ರಾರಂಭಿಸಿದರು.

ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿವೆ. ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಲಾಗಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಹೆಚ್ಚಿನ ಕಾರ್ಯಾಚರಣೆಗಳನ್ನು ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ನಡೆಸಿವೆ.

SCROLL FOR NEXT