ಕೇಂದ್ರ ಸಚಿವೆ ಸ್ಮೃತಿ ಇರಾನಿ 
ದೇಶ

ಸ್ಮೃತಿ ಇರಾನಿಗೆ ಹೆಚ್ಚುವರಿಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೊಣೆ

ಕೇಂದ್ರ ಸಚಿವರಾದ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು  ಅಂಗೀಕರಿಸಿದ್ದಾರೆ ಎಂದು  ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ನವದೆಹಲಿ: ಕೇಂದ್ರ ಸಚಿವರಾದ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ರಾಮಚಂದ್ರ ಪ್ರಸಾದ್ ಸಿಂಗ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ ಎಂದು  ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನಖ್ವಿ ಮತ್ತು ಉಕ್ಕು ಸಚಿವ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದರು.

ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ, ಕ್ಯಾಬಿನೆಟ್ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರಿಗೆ ಈಗಿರುವ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಿಕೊಳ್ಳಲು ರಾಷ್ಟ್ರಪತಿಗಳು ಸೂಚಿಸಿದ್ದಾರೆ.

ಕ್ಯಾಬಿನೆಟ್ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈಗಿರುವ ಖಾತೆಗೆ ಹೆಚ್ಚುವರಿಯಾಗಿ ಉಕ್ಕು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel