ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ 
ದೇಶ

ಲೋಕಸಭೆಯಲ್ಲೂ ಟೀಂ ಠಾಕ್ರೆ v/s ಟೀಂ ಶಿಂಧೆ, ಹೊಸ ಮುಖ್ಯ ಸಚೇತಕರ ನೇಮಕ

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಅಲ್ಪಮತಕ್ಕೆ ಇಳಿದಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಪಕ್ಷದ ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಹೊಸ ಮುಖ್ಯ ಸಚೇತಕರನ್ನು ನೇಮಿಸಿದೆ.

ನವದೆಹಲಿ: ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಅಲ್ಪಮತಕ್ಕೆ ಇಳಿದಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಪಕ್ಷದ ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಹೊಸ ಮುಖ್ಯ ಸಚೇತಕರನ್ನು ನೇಮಿಸಿದೆ.

ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರು ಇಂದು ಲೋಕಸಭೆ ಸ್ಪೀಕರ್ ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ 19 ಮತ್ತು ರಾಜ್ಯಸಭೆಯಲ್ಲಿ ಮೂರು ಸದಸ್ಯರನ್ನು ಹೊಂದಿರುವ ಶಿವಸೇನೆಗೆ ಶಾಸಕರ ಬೆನ್ನಲ್ಲೇ ಸಂಸದರ ನಡುವೆ ಬಂಡಾಯವೇಳುವ ಭೀತಿ ಶುರುವಾಗಿದೆ.

ಕಳೆದ ತಿಂಗಳು ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ 55 ಶಾಸಕರ ಪೈಕಿ 40 ಶಾಸಕರನ್ನು  ಕಳೆದುಕೊಂಡು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡರು. ಈ ವಾರದ ಆರಂಭದಲ್ಲಿ ವಿಧಾನಸಭೆಯಲ್ಲಿ ನಡೆದೆ ಬಹುಮತ ಸಾಬೀತು ಪರೀಕ್ಷೆಯಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ಬಣ 164 ಮತಗಳನ್ನು ಪಡೆದರು.ಕೇವಲ 99 ಶಾಸಕರು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದರು. 

ಹೊಸ ಮೈತ್ರಿಕೂಟ ಈಗಾಗಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸ್ಪೀಕರ್ ಮತ್ತು ಮುಖ್ಯ ಸಚೇತಕರನ್ನು ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತದ ವೇಳೆ ವಿಪ್ ಧಿಕ್ಕರಿಸಿದ ರಾಕ್ರೆ ತಂಡದ ಶಾಸಕರನ್ನು ಅನರ್ಹಗೊಳಿಸುವಂತೆಯೂ ಮನವಿ ಮಾಡಿದ್ದಾರೆ.

ಮೂರನೇ ಎರಡರಷ್ಟು ಬಹಮತದ ಆಧಾರದ ಮೇಲೆ ತಮ್ಮ ಬಣವೇ ನಿಜವಾದ ಶಿವಸೇನೆ ಎಂದು ಶಿಂಧೆ  ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಮೊದಲು ಹಕ್ಕಿ ಮಂಡಿಸಿದ ಅವರು ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರಯತ್ನಿಸುತ್ತಿರುವ ಹತಾಶ ಅಲ್ಪಸಂಖ್ಯಾತರ ನಾಯಕ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT