ಆನಂದ್ ಶರ್ಮಾ, ಜೆ.ಪಿ. ನಡ್ಡಾ 
ದೇಶ

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ

ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ನವದೆಹಲಿ: ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ನನಗೆ ಎಲ್ಲ ಹಕ್ಕಿದೆ. ಇಬ್ಬರು ಒಂದೇ ವಿಚಾರವನ್ನು ಹಂಚಿಕೊಂಡಿರುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.

'ಒಂದು ವೇಳೆ ಅವರನ್ನು ಭೇಟಿಯಾಗಬೇಕಾದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದೇನು ದೊಡ್ಡ ವಿಷಯವೇ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಸೈದ್ಧಾಂತಿಕ ವಿರೋಧಿಗಳು ಎಂದರೆ ನಮ್ಮ ನಡುವೆ ಯಾವುದೇ ವೈಯಕ್ತಿಕ ಒಡಕಿದೆ ಎಂದಲ್ಲ. ನಾವು ಸೈದ್ಧಾಂತಿಕ ವಿರೋಧಿಗಳನ್ನು ಸಾಮಾಜಿಕ ಶತ್ರುಗಳನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದರು. 

ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕಾದರೆ, ಅವರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ, ನನಗೆ ಅವರು ಬಿಜೆಪಿ ಅಧ್ಯಕ್ಷರಲ್ಲ, ನಾವಿಬ್ಬರೂ ಒಂದೇ ರಾಜ್ಯದಿಂದ ಬಂದಿದ್ದು, ಇದರಲ್ಲಿ ರಾಜಕೀಯ ಮಹತ್ವವನ್ನು ಸೇರಿಸಬಾರದು ಎಂದು ಅವರು ಹೇಳಿದರು.

ಶರ್ಮಾ ಅವರು ಗುರುವಾರ ನಡ್ಡಾ ಅವರನ್ನು ಭೇಟಿಯಾದ ಬಗ್ಗೆ ವರದಿಯಾಗಿದೆ. ಆದರೆ, ಈ ವರದಿಯನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT