ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಮೂವರು ಟಿಎಂಸಿ ಕಾರ್ಯಕರ್ತರ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷದ ಗೋಪಾಲ್‌ಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಬೆಳಗ್ಗೆ 9 ಗಂಟೆ ಸುಮಾರಿಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗುತ್ತಿದ್ದಾಗ ಹಂತಕರು ಟಿಎಂಸಿ ನಾಯಕನ ಜೊತೆ ಇದ್ದ ಇಬ್ಬರು ಕಾರ್ಯಕರ್ತರ ಮೇಲೂ ಗುಂಡು ಹಾರಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ ಜನನಿಬಿಡ ರಸ್ತೆಯಲ್ಲಿ ಮೋಟಾರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಮೊದಲು ಮಾಝಿಗೆ ಗುಂಡು ಹಾರಿಸಿದರು. ಆತನಿಗೆ ಗುಂಡು ಹಾರಿಸಿರುವುದನ್ನು ನೋಡಿದ ಇತರ ಇಬ್ಬರು ಓಡಿಹೋಗಲು ಪ್ರಾರಂಭಿಸಿದರು. ಆದರೆ ದಾಳಿಕೋರರು ಹಿಂಬದಿಯಿಂದ ಅವರ ಮೇಲೂ ಗುಂಡು ಹಾರಿಸಿದರು. ಮೂವರ ಮೇಲೆ ಗುಂಡು ಹಾರಿಸಿದ ನಂತರ ಚಾಕುವಿನಿಂದ ಹಲ್ಲೆ ಮಾಡಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ಭೀಕರ ಗುಂಡಿನ ದಾಳಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ