ಅಮ್ನೆಸ್ಟಿ ಇಂಡಿಯಾ 
ದೇಶ

ಅಮ್ನೆಸ್ಟಿ ಇಂಡಿಯಾಗೆ 51.72 ಕೋಟಿ ರೂ., ಮಾಜಿ ಸಿಇಒ ಆಕಾರ್ ಪಟೇಲ್‌ಗೆ 10 ಕೋಟಿ ರೂ. ದಂಡ ವಿಧಿಸಿದ ಇಡಿ

ಆಮ್ನೆಸ್ಟಿ ಇಂಡಿಯಾ ಇಂಟರ್‌ನ್ಯಾಶನಲ್ ಪ್ರೈ. ಲಿಮಿಟೆಡ್ ಮತ್ತು ಅದರ ಮಾಜಿ ಸಿಇಒ ಆಕಾರ್ ಪಟೇಲ್ ಅವರಿಗೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವಾಗಿ 51.72 ಕೋಟಿ ಮತ್ತು 10 ಕೋಟಿ ರೂಪಾಯಿ ದಂಡವನ್ನು ಜಾರಿ ನಿರ್ದೇಶನಾಲಯ (ಇಡಿ) ವಿಧಿಸಿದೆ.

ನವದೆಹಲಿ: ಆಮ್ನೆಸ್ಟಿ ಇಂಡಿಯಾ ಇಂಟರ್‌ನ್ಯಾಶನಲ್ ಪ್ರೈ. ಲಿಮಿಟೆಡ್ ಮತ್ತು ಅದರ ಮಾಜಿ ಸಿಇಒ ಆಕಾರ್ ಪಟೇಲ್ ಅವರಿಗೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವಾಗಿ 51.72 ಕೋಟಿ ಮತ್ತು 10 ಕೋಟಿ ರೂಪಾಯಿ ದಂಡವನ್ನು ಜಾರಿ ನಿರ್ದೇಶನಾಲಯ(ಇಡಿ) ವಿಧಿಸಿದೆ.

ಆಮ್ನೆಸ್ಟಿ ಇಂಟರ್‌ನ್ಯಾಶನಲ್, ಯುಕೆಯು ಎಫ್‌ಡಿಐ ಮಾರ್ಗವನ್ನು ಅನುಸರಿಸಿ ತನ್ನ ಭಾರತೀಯ ಘಟಕಗಳ ಮೂಲಕ(ಎಫ್‌ಸಿಆರ್‌ಎ ಅಲ್ಲದ ಕಂಪನಿಗಳು) 'ದೊಡ್ಡ ಮೊತ್ತದ' ವಿದೇಶಿ ಕೊಡುಗೆಯನ್ನು ರವಾನಿಸುತ್ತಿದೆ ಎಂಬ ಮಾಹಿತಿಯ ಆಧಾರದ ಮೇಲೆ ಇಬ್ಬರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಫೆಡರಲ್ ಏಜೆನ್ಸಿ ಹೇಳಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಿಂದ(FCRA) ತಪ್ಪಿಸಿಕೊಳ್ಳಲು ಉದ್ದೇಶದಿಂದ ಭಾರತದಲ್ಲಿ ತನ್ನ NGO ಚಟುವಟಿಕೆಗಳನ್ನು ವಿಸ್ತರಿಸಿತ್ತು ಎಂಬ ಆರೋಪವಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾ ಫೌಂಡೇಶನ್ ಟ್ರಸ್ಟ್ (ಎಐಐಎಫ್‌ಟಿ) ಮತ್ತು ಎಫ್‌ಸಿಆರ್‌ಎ ಅಡಿಯಲ್ಲಿರುವ ಇತರ ಟ್ರಸ್ಟ್‌ಗಳಿಗೆ ಗೃಹ ವ್ಯವಹಾರಗಳ ಸಚಿವಾಲಯವು ಪೂರ್ವ ನೋಂದಣಿ ಅಥವಾ ಅನುಮತಿಗಳನ್ನು ನಿರಾಕರಿಸಿದ ಹೊರತಾಗಿಯೂ ಇದು ನಡೆದಿದೆ ಎಂದು ಇಡಿ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ(FEMA) ನಿಬಂಧನೆಗಳನ್ನು ಉಲ್ಲಂಘಿಸಿ ಹಣವನ್ನು ಸ್ವೀಕರಿಸಿದ ಕಾರಣ ದಂಡದ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel