ದೇಶ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನು

Sumana Upadhyaya

ನವದೆಹಲಿ: ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಕೇಸಿಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಟ್ವೀಟ್‌ನಲ್ಲಿ ಹಿಂದೂ ದಾರ್ಶನಿಕರನ್ನು 'ದ್ವೇಷ ಪ್ರಚೋದಕರು' ಎಂದು ಟೀಕಿಸಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ ನ್ನು ವಜಾಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು.

ಕೇಸಿಗೆ ಸಂಬಂಧಪಟ್ಟಂತೆ ಯಾವುದೇ ಹೊಸ ಟ್ವೀಟ್ ನ್ನು ಪೋಸ್ಟ್ ಮಾಡಬಾರದು ಹಾಗೂ ಸೀತಾಪುರ ಮ್ಯಾಜಿಸ್ಟ್ರೇಟ್ ಕೋರ್ಟ್ ವ್ಯಾಪ್ತಿಯಿಂದ ಹೊರಗೆ ಹೋಗಬಾರದು ಎಂದು ಷರತ್ತು ವಿಧಿಸಿ 5 ದಿನಗಳಿಗೆ ಜುಬೇರ್ ಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಜುಬೇರ್ ಬೆಂಗಳೂರು ಸೇರಿದಂತೆ ಯಾವ ಕಡೆಯಲ್ಲಿಯೂ ಕೂಡ ಸಾಕ್ಷಿಗಳನ್ನು ತಿರುಚಬಾರದು ಎಂದು ಕೂಡ ಸುಪ್ರೀಂ ಕೋರ್ಟ್ ಷರತ್ತು ಹಾಕಿದೆ. 

SCROLL FOR NEXT