ಟೈಲರ್ ಹತ್ಯೆ ಖಂಡಿಸಿ ಪ್ರತಿಭಟನೆ 
ದೇಶ

ಉದಯಪುರ ಟೈಲರ್ ಹತ್ಯೆ ಪ್ರಕರಣ: ಏಳನೇ ಆರೋಪಿಯನ್ನು ಬಂಧಿಸಿದ ಎನ್ಐಎ

ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ 7ನೇ ಆರೋಪಿಯನ್ನು ಬಂಧಿಸಿದೆ.

ನವದೆಹಲಿ: ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ 7ನೇ ಆರೋಪಿಯನ್ನು ಬಂಧಿಸಿದೆ.

ಬಂಧಿತ ಆರೋಪಿಯನ್ನು ಫರ್ಹಾದ್ ಮೊಹಮ್ಮದ್ ಶೇಖ್ ಎಂದು ಗುರುತಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಎನ್ಐಎ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಶೇಖ್ ಅಲಿಯಾಸ್ ಬಬ್ಲಾನನ್ನು ಬಂಧಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಅವರು ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರಿಯಾಜ್ ಅಖ್ತಾರಿಯಾ ಆಪ್ತರಾಗಿದ್ದು, ಟೈಲರ್ ಹತ್ಯೆ ಪಿತೂರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

ಕಳೆದ ಜೂನ್ 28 ರಂದು ಟೈಲರ್‌ ಕನ್ಹಯ್ಯಾ ಲಾಲ್ ಬಳಿ ಬಟ್ಟೆ ಹೊಲಿಯಲು ಅಳತೆ ಕೊಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಚಾಕುವಿನಿಂದ ಶಿರಚ್ಚೇದ ಮಾಡಿದ ಕ್ರೂರ ದಾಳಿಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಆಗಿದ್ದು, ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ