ಸೋನಿಯಾ ಗಾಂಧಿ (ಸಂಗ್ರಹ ಚಿತ್ರ) 
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ 21ಕ್ಕೆ ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಇಡಿ ಹೊಸ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.  

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಈ ಮೂಲಕ ಹೆಚ್ಚಿನ ಕಾಲಾವಕಾಶ ಕೋರಿದ್ದ ಸೋನಿಯಾ ಗಾಂಧಿ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.

ಜೂನ್ 2ರಂದು ಕೋವಿಡ್‌ ದೃಢಪಟ್ಟ ನಂತರ 75 ವರ್ಷದ ಸೋನಿಯಾ ಗಾಂಧಿ ಇಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹಲವು ಬಾರಿ ಸಮನ್ಸ್ ನೀಡಿದರೂ ಕೋವಿಡ್ ಸೋಂಕು, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ  ಏಜೆನ್ಸಿಯ ಮುಂದೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೇಳಿದ್ದರು.

ಸೋನಿಯಾ ಗಾಂಧಿಯವರ ಪುತ್ರ ರಾಹುಲ್ ಗಾಂಧಿ ಅವರು ಇದೇ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ಎದುರು ಐದು ದಿನಗಳ ಕಾಲ ಸರಣಿ ವಿಚಾರಣೆ ಎದುರಿಸ್ದಾರೆ. ಇದಕ್ಕೂ ಮುನ್ನ ಇಡಿ ತನಿಖೆಯ ಭಾಗವಾಗಿ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ