ಭಾರತೀಯ ಸೇನೆ 
ದೇಶ

ಶ್ರೀನಗರ: ಭಯೋತ್ಪಾದಕರ ಗುಂಡಿನ ದಾಳಿ; ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ, ಇಬ್ಬರಿಗೆ ಗಾಯ!

ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ದಾಳಿ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀನಗರ: ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ದಾಳಿ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ದಾಳಿಕೋರರನ್ನು ಪತ್ತೆ ಹಚ್ಚಲು ಪ್ರದೇಶವನ್ನು ಸುತ್ತುವರಿದಿದ್ದಾರೆ. ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಾಲ್ ಬಜಾರ್‌ನಲ್ಲಿರುವ ಜಿಡಿ ಗೋಯೆಂಕಾ ಶಾಲೆಯ ಹೊರಗೆ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ದಾಳಿಯನ್ನು ಹಿಮ್ಮೆಟ್ಟಿಸಿದರು ಆದರೆ ದಾಳಿಕೋರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿ ಹೇಳಿದ್ದಾರೆ.

ಗುಂಡಿನ ದಾಳಿ ನಡೆದ ಕೂಡಲೇ ಹಿರಿಯ ಅಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ನಡುವೆ ಭದ್ರತೆಯು ಹೆಚ್ಚಿರುವಾಗ ಭಯೋತ್ಪಾದಕರ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ