ಸಂಜಯ್ ರಾವತ್ 
ದೇಶ

ದ್ರೌಪದಿ ಮುರ್ಮುರನ್ನು ಬೆಂಬಲಿಸುವುದು ಎಂದರೆ ಬಿಜೆಪಿ ಬೆಂಬಲಿಸುವುದು ಎಂದಲ್ಲ: ಸಂಜಯ್ ರಾವತ್

ರಾಷ್ಟ್ರಪತಿ ಚುನಾವಣೆಯಲ್ಲಿ ಯಾರನ್ನ ಬೆಂಬಲಿಸಬೇಕೆಂಬ ವಿಚಾರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತನ್ನ ಸಂಸದರ ಬೇಡಿಕೆಗೆ ಮಣಿದಿದೆ. ಜುಲೈ 18ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಶಿವಸೇನೆ ಬೆಂಬಲಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: ರಾಷ್ಟ್ರಪತಿ ಚುನಾವಣೆಯಲ್ಲಿ ಯಾರನ್ನ ಬೆಂಬಲಿಸಬೇಕೆಂಬ ವಿಚಾರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತನ್ನ ಸಂಸದರ ಬೇಡಿಕೆಗೆ ಮಣಿದಿದೆ. ಜುಲೈ 18ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಶಿವಸೇನೆ ಬೆಂಬಲಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ 22 ಸಂಸದರಲ್ಲಿ 16 ಮಂದಿ ಉದ್ಧವ್ ಠಾಕ್ರೆ ಅವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ ಒಂದು ದಿನದ ನಂತರ ದ್ರೌಪತಿ ಮುರ್ಮು ಅವರನ್ನು ಬೆಂಬಲಿಸುವ ನಿರ್ಧಾರವು ಹೊರಬಿದ್ದಿದೆ. ಸಭೆಯಲ್ಲಿ ಬಹುತೇಕರು ಮುರ್ಮು ಬುಡಕಟ್ಟು ಸಮುದಾಯದ ಮಹಿಳೆಯಾಗಿರುವುದರಿಂದ ಅವರಿಗೆ ಮತ ಹಾಕಬೇಕೆಂದು ಹೇಳಿದ್ದಾರೆ. ಹೀಗಾಗಿ ದ್ರೌಪತಿ ಮುರ್ಮುರನ್ನು ಬೆಂಬಲಿಸುತ್ತಿದ್ದೇವೆ. ಹಾಗೆಂದ ಮಾತ್ರಕ್ಕೆ ನಮ್ಮ ಬೆಂಬಲ ಬಿಜೆಪಿಗಿದೆ ಎಂದೆಲ್ಲ ಎಂದು ಸಂಸದ ಸಂಜತ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನರು ಪರಿಶಿಷ್ಟ ಪಂಗಡದವರು ಎಂಬುದನ್ನ ಇಲ್ಲಿ ಗಮನಿಸಬಹುದು. ಈಗಾಗಲೇ ಎನ್‌ಡಿಎಗೆ ಸಂಖ್ಯಾಬಲವಿರುವುದರಿಂದ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಅವರು ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗುತ್ತಾರೆ.

ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಜಂಟಿ ಅಭ್ಯರ್ಥಿ ಎಂದು ಪ್ರತಿಪಕ್ಷವು ಘೋಷಿಸಿದೆ. ಆದರೂ ಹಲವಾರು ಎನ್‌ಡಿಎಯೇತರ ಪಕ್ಷಗಳು ದ್ರೌಪತಿ ಮುರ್ಮು ಅವರ ಬುಡಕಟ್ಟು ಗುರುತನ್ನು ಉಲ್ಲೇಖಿಸಿ ಅವರನ್ನು ಬೆಂಬಲಿಸಲು ಆಯ್ಕೆ ಮಾಡಿಕೊಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್