ಹಣ ವಾಪಸ್ ಕೇಳಿದ ವ್ಯಕ್ತಿ 
ದೇಶ

ಪಂಚಾಯಿತಿ ಚುನಾವಣೆಯಲ್ಲಿ ಸೋಲು: ಹಂಚಿದ್ದ ಹಣ ವಾಪಸ್ ನೀಡುವಂತೆ ಧಮ್ಕಿ; ವ್ಯಕ್ತಿ ವಿರುದ್ಧ ಪ್ರಕರಣ!

ಮತದಾನದ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸೋತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನೀಮುಚ್(ಮಧ್ಯಪ್ರದೇಶದ): ಮತದಾನದ ವೇಳೆ ಹಂಚಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಂತೆ ಜನರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪಂಚಾಯತ್ ಚುನಾವಣೆಯಲ್ಲಿ ಸೋತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಾನಸ ತಹಸಿಲ್‌ನ ದೇವರಾನ್ ಗ್ರಾಮ ಪಂಚಾಯತ್‌ನ ಸರಪಂಚ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸೋತ ನಂತರ ಹಣವನ್ನು ಹಿಂದಿರುಗಿಸುವಂತೆ ರಾಜು ದೈಮಾ ಎಂಬ ವ್ಯಕ್ತಿ ಜನರನ್ನು ಕೇಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ.

ರಾಜು ದೈಮಾ ಮತ್ತು ಆತನ ಸಹಚರ ಕನ್ಹಯ್ಯಾ ಬಂಜಾರಾ ವಿರುದ್ಧ ಐಪಿಸಿಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 294 (ಅಶ್ಲೀಲ ಕೃತ್ಯ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ರಾಂಪುರ ಪೊಲೀಸ್ ಠಾಣೆಯಲ್ಲಿ ಜನರಿಗೆ ಬೆದರಿಕೆ ಮತ್ತು ಥಳಿಸಿದ ಆರೋಪವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಚುನಾವಣೆ ವೇಳೆ ಹಣ ಹಂಚಿಕೆ ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಹೆಚ್ಚಿನ ಆರೋಪಗಳನ್ನು ಸೇರಿಸಬಹುದು ಎಂದು ಅವರು ಹೇಳಿದರು. ಮೂಲಗಳ ಪ್ರಕಾರ, ಪಂಚಾಯತಿ ಚುನಾವಣೆಯಲ್ಲಿ ಸೋತ ನಂತರ ಆರೋಪಿಯು ಜನರಿಂದ ಸುಮಾರು 4 ಲಕ್ಷ ರೂ. ವಸೂಲಿ ಮಾಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ