ಸುಷ್ಮಿತಾ ಸೇನ್ ಜೊತೆ ಲಲಿತ್ ಮೋದಿ 
ದೇಶ

ಲಲಿತ್ ಮೋದಿ- ಸುಶ್ಮಿತಾ ಸೇನ್ ಡೇಟಿಂಗ್; ಶೀಘ್ರದಲ್ಲೇ ಇಬ್ಬರ ಮದುವೆ?

ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಲಲಿತ್ ಮೋದಿ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಗುಸು ಗುಸು ನಡುವೆ ಈಗ ಸ್ವತಃ ಲಲಿತ್ ಮೋದಿ ಈ ವಿಷಯವಾಗಿ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ: ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಲಲಿತ್ ಮೋದಿ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಗುಸು ಗುಸು ಜೋರಾಗಿತ್ತು. ಇದೀಗ ಆ ಗುಸುಗುಸು ಮಾತಿಗೆ ಲಲಿತ್ ಮೋದಿ ಸ್ಪಷ್ಟನೆ ನೀಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ಇಂದು ನಟಿ ಸುಶ್ಮಿತಾ ಸೇನ್ ಅವರೊಂದಿಗೆ “ಹೊಸ ಆರಂಭ” ವನ್ನು ಘೋಷಿಸಿದ್ದಾರೆ. ಸುಶ್ಮಿತಾ ಸೇನ್ ಅವರನ್ನು ತಮ್ಮ ಬೆಟರ್ ಹಾಫ್ ಎಂದು ಕರೆದಿದ್ದಾರೆ.

ಸುಶ್ಮಿತಾ ಸೇನ್ ಮತ್ತು ಲಲಿತ್ ಮೋದಿ ಮದುವೆಯಾಗಿದ್ದಾರೆಂಬ ವದಂತಿ ನಡುವೆ ಸರಣಿ ಫೋಟೋಗಳನ್ನು ಹಂಚಿಕೊಂಡಿರುವ ಲಲಿತ್ ಮೋದಿ ಮಾಲ್ಡೀವ್ಸ್, ಸರ್ದಾನಿಯಾ ಗಳಲ್ಲಿ ಸುಶ್ಮಿತಾ ಸೇನ್ ಜೊತೆ ಸುತ್ತಾಡಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಲಂಡನ್ ನಲ್ಲಿರುವುದಾಗಿ ತಿಳಿಸಿರುವ ಲಲಿತ್ ಮೋದಿ ಬೆಟರ್‌ಹಾಫ್ ಸುಶ್ಮಿತಾ ಸೇನ್ ಜೊತೆ ಹೊಸ ಜೀವನ ಪ್ರಾರಂಭಿಸಿರುವುದಾಗಿ ತಿಳಿಸಿದ್ದಾರೆ.

ಇಬ್ಬರೂ ಮದುವೆಯಾಗಿದ್ದಾರಾ ಎಂಬ ಚರ್ಚೆ ಜೋರಾಗ್ತಿದ್ದಂತೆ ಮತ್ತೊಂದು ಟ್ವೀಟ್ ನಲ್ಲಿ ಲಲಿತ್ ಮೋದಿ, ಇಬ್ಬರೂ ಇನ್ನೂ ಮದುವೆಯಾಗಿಲ್ಲ, ಕೇವಲ ಡೇಟಿಂಗ್ ಮಾಡುತ್ತಿದ್ದೀವಿ ಎಂದು ಸ್ಪಷ್ಟಪಡಿಸಿದ್ದಾರೆ. ಮದುವೆ ಕೂಡ ಮುಂದೊಂದು ದಿನ ಸಂಭವಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

2010ರಲ್ಲಿ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಮಧ್ಯೆ ಲಲಿತ್ ಮೋದಿ ಭಾರತ ತೊರೆದಿದ್ದರು. ಅಂದಿನಿಂದ ಅವರು ಲಂಡನ್‌ನಲ್ಲಿದ್ದಾರೆ.

ಸುಶ್ಮಿತಾ ಸೇನ್ 1994 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಪಡೆದಿದ್ದಾರೆ. ಅವರು 1996 ರ ದಸ್ತಕ್ ಚಲನಚಿತ್ರದಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅವರು ಬಿವಿ ನಂ 1, ಡು ನಾಟ್ ಡಿಸ್ಟರ್ಬ್, ಮೈ ಹೂ ನಾ, ಮೈನೆ ಪ್ಯಾರ್ ಕ್ಯೂನ್ ಕಿಯಾ ಮತ್ತು ತುಮ್ಕೋ ನಾ ಭೂಲ್ ಪಾಯೆಂಗೆ ಮತ್ತು ನೋ ಪ್ರಾಬ್ಲಂ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅಲಿಸಾ ಮತ್ತು ರೆನೀ ಎಂಬ ಇಬ್ಬರು ಹೆಣ್ಣುಮಕ್ಕಳಿಗೆ ಸುಶ್ಮಿತಾ ಸೇನ್ ಒಂಟಿ ತಾಯಿಯಾಗಿದ್ದಾರೆ. ಸೇನ್ 2000 ರಲ್ಲಿ ರೆನೀಯನ್ನು ದತ್ತು ಪಡೆದರು. ಅಲಿಸಾ 2010 ರಲ್ಲಿ ಕುಟುಂಬವನ್ನು ಸೇರಿಕೊಂಡರು. ರೆನೀ ಅವರು ಕಿರುಚಿತ್ರದ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್